ಭಾರತ ಮೇಲೆ ಪಾಕ್ ದಾಳಿಗೆ ಚೀನಾ ನೆರವು, ಡ್ರ್ಯಾಗನ್ ಕರಾಳ ಮುಖ ಬಯಲು!
ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ಹಿಂದೇಟು ಹಾಕುತ್ತಿದೆ.

Published On :
ನವದೆಹಲಿ: ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ಹಿಂದೇಟು ಹಾಕುತ್ತಾ, ಪಾಕಿಸ್ತಾನದ ಬೆನ್ನಿಗೆ ನಿಂತಿರುವ ಚೀನಾ ಇದೀಗ ಅತ್ಯಾಧುನಿಕ ಡ್ರೋನ್ ಗಳನ್ನು ಪಾಕ್ ಗೆ ಮಾರಾಟ ಮಾಡಲು ಮುಂದಾಗಿದ್ದು ಭಾರತದ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ.
ಚೀನಾ ತನ್ನ ಅತ್ಯಾಧುನಿಕ ಡ್ರೋನ್ ಗಳಾದ ರೈನ್ ಬೋ ಗಳನ್ನು ಪಾಕ್ ಗೆ ಮಾರಾಟ ಮಾಡವ ಮೂಲಕ ಬಹಿರಂಗವಾಗಿಯೇ ಪಾಕ್ ಗೆ ಬೆಂಬಲ ಸೂಚಿಸಿದೆ. ಪಾಕಿಸ್ತಾನದ ಬಾಲಕೋಟ್ ನಲ್ಲಿ ಭಾರತೀಯ ವಾಯುಪಡೆ ನಡೆಸಿದ ಏರ್ ಸ್ಟ್ರೈಕ್ ನಂತರ ತನ್ನ ರೈನ್ ಬೋ ಸಿಎಚ್-4 ಹಾಗೂ ಸಿಎಚ್-5ಗಳನ್ನು ಮಾರಾಟ ಮಾಡಲು ಮುಂದಾಗಿದೆ.
ಭಾರತದ ದಿಢೀರ್ ದಾಳಿ ನಂತರ ಎಚ್ಚೇತ್ತುಕೊಂಡಿರುವ ಪಾಕಿಸ್ತಾನ ತನ್ನ ಗಡಿ ಸುತ್ತಲೂ ಕಣ್ಗಾವಲು ಇರಿಸಲು ಹೆಚ್ಚಿನ ಡ್ರೋನ್ ಗಳನ್ನು ನಿಯೋಜಿಸಲು ಪಾಕಿಸ್ತಾನ ಮುಂದಾಗಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.
ಸಿಎಚ್-4 ಡ್ರೋನ್ 400 ಕೆಜಿಯಷ್ಟು ಸ್ಫೋಟಕಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹಾಗೂ 40 ಗಂಟೆಗಳ ಕಾಲ ಗಾಳಿಯಲ್ಲಿ ಹಾರಾಡುತ್ತದೆ. 5 ಸಾವಿರ ಕಿಮೀವರೆಗೆ ತನ್ನ ವ್ಯಾಪ್ತಿ ಹೊಂದಿದೆ. ಇನ್ನು ಸಿಎಚ್-5 1000 ಕೆಜಿಯಷ್ಟು ಸ್ಫೋಟಕಗಳನ್ನು ಹೊತ್ತೊಯ್ಯುವ 60 ಗಂಟೆಗಳ ಕಾಲ ಗಾಳಿಯಲ್ಲಿ ಹಾರಾಡುವ ಸಾಮರ್ಥ್ಯ ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


