ಆಂಧ್ರಪ್ರದೇಶ ಆಸೆಂಬ್ಲಿ ಚುನಾವಣೆ: ಎರಡು ಕ್ಷೇತ್ರಗಳಲ್ಲಿ ಪವನ್ ಕಲ್ಯಾಣ್ ಸ್ಪರ್ಧೆ
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ.ಭೀಮಾವರಂ ಹಾಗೂ ಗಾಜುವಾಕದಿಂದ ಅವರು ಚುನಾವಣಾ ಕಣಕ್ಕಿಳಿಯಲಿದ್ದಾರೆ.

ಅಮರಾವತಿ: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ.ಭೀಮಾವರಂ ಹಾಗೂ ಗಾಜುವಾಕದಿಂದ ಅವರು ಚುನಾವಣಾ ಕಣಕ್ಕಿಳಿಯಲಿದ್ದಾರೆ.
ಆಂಧ್ರಪ್ರದೇಶದ ಒಟ್ಟಾರೇ 175 ಕ್ಷೇತ್ರಗಳ ಪೈಕಿಯಲ್ಲಿ 21 ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧಿಸುತ್ತಿದ್ದರೆ,ಏಳು ಕ್ಷೇತ್ರಗಳಲ್ಲಿ ಸಿಪಿಐ ಮತ್ತು ಸಿಪಿಎಂ ಪಕ್ಷಗಳು ಸ್ಪರ್ಧಿಸುತ್ತಿವೆ. ಉಳಿದ ಕ್ಷೇತ್ರಗಳಲ್ಲಿ ಪವನ್ ಕಲ್ಯಾಣ್ ಸ್ಥಾಪಿಸಿರುವ ಜನಸೇನಾ ಪಕ್ಷ ಸ್ಪರ್ಧಿಸುತ್ತಿದೆ.
ಲೋಕಸಭಾ ಚುನಾವಣೆಗೆಗಾಗಿ ಬಿಎಸ್ಪಿ, ಸಿಪಿಐ, ಸಿಪಿಎಂ ಹಾಗೂ ಜನಸೇನಾ ನಡುವಿನ ಸೀಟು ಹೊಂದಾಣಿಕೆ ಒಪ್ಪಂದ ನಿನ್ನೆ ನೆರವೇರಿತ್ತು.ಬಿಎಸ್ಪಿ ಮೂರು, ಸಿಪಿಐ ಹಾಗೂ ಸಿಪಿಎಂ ತಲಾ ಒಂದೊಂದು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒಪ್ಪಂದ ಮಾಡಿಕೊಂಡಿವೆ.ಉಳಿದ ಕ್ಷೇತ್ರಗಳಲ್ಲಿ ಜನ ಸೇನಾ ಪಕ್ಷ ಚುನಾವಣಾ ಕಣಕ್ಕಿಳಿಯಲಿದೆ.
ಆಂಧ್ರಪ್ರದೇಶದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯನ್ನು ಏಕಕಾಲದಲ್ಲಿ ಚುನಾವಣಾ ಆಯೋಗ ನಡೆಸುತ್ತಿದ್ದು, ಏಪ್ರಿಲ್ 11 ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ನಿನ್ನೆ ಪ್ರಕಟಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


