ದೇಶ

'ಪಾಕ್ ರಾಷ್ಟ್ರೀಯ ದಿನಾಚರಣೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ'

ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆ ಮಾ.23 ರಂದು ನಡೆಯಲಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಶುಭಾಶಯ ಕೋರಿದ್ದಾರಂತೆ.

'ಪಾಕ್ ರಾಷ್ಟ್ರೀಯ ದಿನಾಚರಣೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ'
'ಪಾಕ್ ರಾಷ್ಟ್ರೀಯ ದಿನಾಚರಣೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ'
Published On :
ಇಸ್ಲಾಮಾಬಾದ್: ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆ ಮಾ.23 ರಂದು ನಡೆಯಲಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಶುಭಾಶಯ ಕೋರಿದ್ದಾರಂತೆ. 
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ಈ ವಿಷಯ ಬಹಿರಂಗಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ರಾಷ್ಟ್ರೀಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ ಎಂದು ತಿಳಿಸಿದ್ದಾರೆ. 
" ಪಾಕಿಸ್ತಾನದ ಜನತೆಗೆ ರಾಷ್ಟ್ರೀಯ ದಿನಾಚರಣೆಯ ಶುಭಾಶಯ ತಿಳಿಸುತ್ತೇನೆ, ಉಪಖಂಡ ಜನತೆ ತಮ್ಮ ಪ್ರದೇಶದ ಶಾಂತಿ, ಅಭಿವೃದ್ಧಿ ಹಾಗೂ ಸಂವೃದ್ಧಿಗೆ ಭಯೋತ್ಪಾದನೆ ಹಾಗೂ ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಒಟ್ಟಿಗೆ ಕೆಲಸ ಮಾಡುವ ಸಮಯ ಇದು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಪಾಕಿಸ್ತಾನದ ರಾಷ್ಟ್ರೀಯ ದಿನಾಚರಣೆ ಸಮಾರಂಭಗಳನ್ನು ಬಹಿಷ್ಕರಿಸಲು ಹಾಗೂ ಪ್ರತಿನಿಧಿಗಳನ್ನು ಕಳಿಸದೇ ಇರಲು ಕೇಂದ್ರ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ಪಾಕಿಸ್ತಾನದ ರಾಷ್ಟ್ರೀಯ ದಿನಾಚರಣೆಗೆ ಪ್ರಧಾನಿ ಮೋದಿ ಶುಭಾಶಯ ಸಂದೇಶ ರವಾನೆ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.