ದೇಶ

ಬಿಹಾರ: ಲೋಕ ಜನಶಕ್ತಿ ಪಕ್ಷದ ನಾಯಕನ ಪುತ್ರನನ್ನು ಥಳಿಸಿ ಹತ್ಯೆ!

ಲೋಕ ಜನಶಕ್ತಿ ಪಕ್ಷದ (ಎಲ್ ಜಿಪಿ) ನಾಯಕನ ಪುತ್ರನನ್ನು ಗುಂ ಪೊಇಂದು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಮುಂಗರ್ ಜಿಲ್ಲೆಯ ರಾಮನಗರ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಹಾರ: ಲೋಕ ಜನಶಕ್ತಿ ಪಕ್ಷದ ನಾಯಕನ ಪುತ್ರನನ್ನು ಥಳಿಸಿ ಹತ್ಯೆ!
ಸಂಗ್ರಹ ಚಿತ್ರ
Published On :
ಮುಂಗರ್(ಬಿಹಾರ): ಲೋಕ ಜನಶಕ್ತಿ ಪಕ್ಷದ (ಎಲ್ ಜಿಪಿ) ನಾಯಕನ ಪುತ್ರನನ್ನು ಗುಂಪೊಇಂದು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಮುಂಗರ್ ಜಿಲ್ಲೆಯ ರಾಮನಗರ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜಮಾಲ್ಪುರ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಾಧನಾ ದೇವಿ ಮತ್ತು ಕೃಷ್ಣಾನಂದ ಯಾದವ್ ಅವರ ಮಗನಾದ ಶಿವಂ ಕುಮಾರ್ (25)  ಹೋಳಿ ಆಚರಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬಳ ಮೇಲೆ ಬಣ್ಣ ಹಚ್ಚಿ ದುರ್ವರ್ತನೆ ತೋರಿದ್ದನೆನ್ನಲಾಗಿದ್ದು ಹಳ್ಳಿಗರು ಆತನನ್ನು ಮಾರಣಾಂತಿಕವಾಗಿ ಥಳಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಸ್ತುತ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ವಿಷಯವನ್ನು ತನಿಖೆ ಮಾಡಲಾಗುತ್ತಿದೆ, ಶೀಘ್ರವೇ ಆರೋಪಿಗಳನ್ನು ಬಂಧಿಸಲಿದ್ದೇವೆ  ಎಂದು ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ಹರಿಶಂಕರ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.