ಬಾಲಕನ ಕತ್ತು ಸೀಳಿದ್ದ 2 ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಸೇನಾಪಡೆಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಒತ್ತೆಯಾಳಾಗಿಟ್ಟುಕೊಂಡಿದ್ದ ಬಾಲಕನನ್ನು ಕತ್ತು ಸೀಳಿ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

Published On :
ನವದೆಹಲಿ: ಸೇನಾಪಡೆಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಒತ್ತೆಯಾಳಾಗಿಟ್ಟುಕೊಂಡಿದ್ದ ಬಾಲಕನನ್ನು ಕತ್ತು ಸೀಳಿ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಬಂಡೀಪೋರಾದ ಹಜಿನ್ ಪ್ರದೇಶದಲ್ಲಿ 12 ವರ್ಷದ ಬಾಲಕನನ್ನು ಅತೀಫ್ ಮಿರ್ ನ್ನು ಕತ್ತು ಸೀಳಿ ಲಷ್ಕರ್ ಉಗ್ರರು ಹತ್ಯೆ ಮಾಡಿದ್ದರು. ಅತೀಫ್ ಮಿರ್ ನ್ನು ಬಿಡುಗಡೆ ಮಾಡುವಂತೆ ಕುಟುಂಬ ಸದಸ್ಯರು ನಿರಂತರವಾಗಿ ಉಗ್ರರಿಗೆ ಮನವಿ ಮಾಡಿದ್ದರು.
ಭಯೋತ್ಪಾದಕರು ಬಾಲಕನ ಸಹೋದರಿಗೆ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದರು. ಆದರೆ ಕುಟುಂಬ ಸದಸ್ಯರು ಆಕೆ ತಪ್ಪಿಸಿಕೊಳ್ಳುವುದಕ್ಕೆ ಸಹಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಭಯೋತ್ಪಾದಕರು ಬಾಲಕನ ಮನೆಯವರ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೇ ಬೆದರಿಕೆ ಹಾಕಿ ಮನೆಯಲ್ಲಿ ಆಶ್ರಯ ಪಡೆದು ಬಾಲಕನನ್ನು ಒತ್ತೆಯಾಳಾಗಿರಿಸಿಕೊಂಡಿದ್ದರು. ಕುಟುಂಬ ಸದಸ್ಯರ ಕೂಗನ್ನು ಕೇಳಿಸಿಕೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕುಟುಂಬ ಸದಸ್ಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಭಯೋತ್ಪಾದಕರು ಪೊಲೀಸರು ಹಾಗೂ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದ್ದಾರೆ.
ಭದ್ರತಾ ಪಡೆಗಳು ಉಗ್ರರನ್ನು ಎನ್ ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಎನ್ ಕೌಂಟರ್ ನಲ್ಲಿ ಹತ್ಯೆಯಾದ ಉಗ್ರರನ್ನು ಪಾಕಿಸ್ತಾನದ ಅಲಿ ಹಾಗೂ ಹುಬಾಯಿಬ್ ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


