ಪ್ರತಿದಾಳಿಯಲ್ಲಿ 12 ಪಾಕ್ ಸೈನಿಕರ ಹತ್ಯೆಗೈದ ಭಾರತೀಯ ಯೋಧರು!
ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನದ ಸೈನಿಕರ ಮೇಲೆ ಭಾರತೀಯ ಯೋಧರು ಗುಂಡಿನ ಮಳೆಗೈದಿದ್ದು ಪರಿಣಾಮ 12 ಮಂದಿ ಪಾಕ್...

Published On :
ನವದೆಹಲಿ: ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನದ ಸೈನಿಕರ ಮೇಲೆ ಭಾರತೀಯ ಯೋಧರು ಗುಂಡಿನ ಮಳೆಗೈದಿದ್ದು ಪರಿಣಾಮ 12 ಮಂದಿ ಪಾಕ್ ಸೈನಿಕರು ಮೃತಪಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಸುಂದರ್ ಬನಿ ವಲಯದಲ್ಲಿ ಗುರುವಾರ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಪಾಕ್ ನ ಇಬ್ಬರು ಸೇನಾ ಅಧಿಕಾರಿಗಳು ಸೇರಿದಂತೆ 12 ಸೈನಿಕರಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜೊತೆಗೆ ಈ ದಾಳಿಯಲ್ಲಿ 22 ಜನ ಪಾಕ್ ಯೋಧರು ಗಂಭೀರವಾಗಿ ಗಯಗೊಂಡಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಯಾರಿಗೂ ತಿಳಿಯದಂತೆ ಪಾಕಿಸ್ತಾನದ ಮಿ-17 ಹೆಲಿಕಾಪ್ಟರ್ ಮೂಲಕ ಪಾಕ್ ಸೇನೆ ಮೃತ ಸೈನಿಕರ ಮೃತದೇಹವನ್ನು ಸುಂದರಬನಿ ವಲಯದಿಂದ ರಾವಲ್ಪಿಂಡಿಗೆ ಸಾಗಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


