ಗವರ್ನರ್, ಸರ್ಕಾರಿ ಸಂಸ್ಥೆಗಳು ಹಾಗೂ ಮಾಧ್ಯಮ ಬಿಜೆಪಿಯ ಪ್ರಮುಖ ಪ್ರಚಾರಕರು: ಅಖಿಲೇಶ್ ಯಾದವ್
ಗವರ್ನರ್, ಸರ್ಕಾರಿ ಸಂಸ್ಥೆಗಳು ಹಾಗೂ ಮಾಧ್ಯಮ ಬಿಜೆಪಿಯ ಪ್ರಮುಖ ಪ್ರಚಾರಕರಾಗಿದ್ದಾರೆ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ...

Published On :
ನವದೆಹಲಿ: ಗವರ್ನರ್, ಸರ್ಕಾರಿ ಸಂಸ್ಥೆಗಳು ಹಾಗೂ ಮಾಧ್ಯಮ ಬಿಜೆಪಿಯ ಪ್ರಮುಖ ಪ್ರಚಾರಕರಾಗಿದ್ದಾರೆ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ರಾಜಸ್ತಾನ ರಾಜ್ಯಪಾಲ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಹೇಳಿಕೆಗೆ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿದ್ದಾರೆ,
ಬಿಜೆಪಿ ಕಳೆದ ಐದು ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿಸಿದೆ, ರೈತರಿಗೆ ಅವಮಾನ ಮಾಡಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ವಿರೋಧ ಪಕ್ಷವನ್ನು ಪ್ರಮುಖ ಅಜೆಂಡಾವಾಗಿರಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ದೇಶದಲ್ಲೇ ಅತ್ಯಂತ ಹೆಚ್ಚಿನ ಜಾತಿವಾದಿ ಪಕ್ಷವಾಗಿದೆ, ಹೀಗಾಗಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


