ದೇಶ

ಶಂಕಿತ ಪಾಕ್ ಗೂಢಾಚಾರಿ ಫರ್ವೇಜ್ 4 ದಿನ ಪೊಲೀಸ್ ವಶಕ್ಕೆ!

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಗೂಢಚಾರಿಕೆ ಮಾಡುತ್ತಿದ್ದ ಆರೋಪದ ಮೇರೆಗೆ ಬಂಧನಕ್ಕೀಡಾಗಿದ್ದ ಮೊಹಮದ್ ಫರ್ವೇಜ್ ನನ್ನು ಜೈಪುರ ಕೋರ್ಟ್ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ಶಂಕಿತ ಪಾಕ್ ಗೂಢಾಚಾರಿ ಫರ್ವೇಜ್ 4 ದಿನ ಪೊಲೀಸ್ ವಶಕ್ಕೆ!
ಸಂಗ್ರಹ ಚಿತ್ರ
Published On :
ಜೈಪುರ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಗೂಢಚಾರಿಕೆ ಮಾಡುತ್ತಿದ್ದ ಆರೋಪದ ಮೇರೆಗೆ ಬಂಧನಕ್ಕೀಡಾಗಿದ್ದ ಮೊಹಮದ್ ಫರ್ವೇಜ್ ನನ್ನು ಜೈಪುರ ಕೋರ್ಟ್ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
ಭಾರತದಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಜೈಪುರದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮೂಲದ ಮೊಹಮದ್ ಫರ್ವೇಜ್ ನನ್ನು ಜೈಪುರ ಕೋರ್ಟ್ ನಾಲ್ಕು ದಿನಗಳ ಪೊಲೀಸ್ ವಶಕ್ಕೆ ನೀಡಿದೆ. 
ದೆಹಲಿ ಮೂಲದ ಸುಮಾರು 42 ವರ್ಷದ ಮೊಹಮದ್ ಫರ್ವೇಜ್ ಎಂಬಾತನ್ನು ರಾಜಸ್ಥಾನ ಪೊಲೀಸರು ಸೋಮವಾರ ಬಂಧಿಸಿದ್ದು, ಈತ ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್ಐ ಪರವಾಗಿ ಭಾರತದಲ್ಲಿ ಕೆಲಸ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಹಿಂದೆಯೂ ಕೂಡ ಇದೇ ಮೊಹಮದ್ ಫರ್ವೇಜ್ ನನ್ನು 2017ರಲ್ಲಿ ಎನ್ ಐಎ ಅಧಿಕಾರಿಗಳು ರಾಷ್ಟ್ರದ್ರೋಹಿ ಚುಟವಟಿಕೆಯಲ್ಲಿ ಭಾಗಿಯಾದ ಆರೋಪದ ಮೇರೆಗೆ ಬಂಧಿಸಿದ್ದರು ಎನ್ನಲಾಗಿದೆ. ಇದೀಗ ಜೈಪುರಕ್ಕೆ ಈತನನ್ನು ವಿಚಾರಣೆಗೆ ಕರೆತಂದಿದ್ದು ಈ ವೇಳೆ ಈತ ತಾನು 17ಕ್ಕೂ ಹೆಚ್ಚು ಬಾರಿ ಪಾಕಿಸ್ತಾನಕ್ಕೆ ಹೋಗಿ ಬಂದಿದ್ದೇನೆ ಎಂಬ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ ಎಂದು ಗುಪ್ತಚರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಉಮೇಶ್ ಮಿಶ್ರಾ ತಿಳಿಸಿದ್ದಾರೆ.
ಅಂತೆಯೇ ಇದೇ ಮೊಹಮದ್ ಫರ್ವೇಜ್ ಈ ಹಿಂದೆ ಸೈನಿಕರನ್ನು ಹನಿಟ್ರ್ಯಾಪ್ ಮಾಡಿ ರಹಸ್ಯ ಮಾಹಿತಿಗಳನ್ನು ಪಡೆದಿರುವ ಶಂಕೆ ಕೂಡ ಅಧಿಕಾರಿಗಳಿಗೆ ವ್ಯಕ್ತವಾಗಿದೆ. ಸೇನೆಯ ನಕಲಿ ಗುರುತಿನ ಚೀಟಿ ಮೂಲಕ ಸೇನೆಯ ರಹಸ್ಯ ದಾಖಲೆಗಳಲ್ಲಿನ ಅಂಶಗಳನ್ನು ಕಲೆಹಾಕಿ ಅದನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದ ಮತ್ತು ಈತನಿಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐ ಆರ್ಥಿಕ ನೆರವು ನೀಡುತ್ತಿತ್ತು  ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.