ವಿಜ್ಞಾನಿಗಳ ಸಾಧನೆ ಕುರಿತ ಮೋದಿ ಭಾಷಣ: ನೀತಿ ಸಂಹಿತೆ ಉಲ್ಲಂಘನೆ ತನಿಖೆಗೆ ಮುಂದಾದ ಆಯೋಗ
ಪ್ರಧಾನಿ ನರೇಂದ್ರ ಮೋದಿ ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ಸಾಧನೆ ಕುರಿತಂತೆ ಬುಧವಾರ ಬೆಳಿಗ್ಗೆ ಮಾಡಿದ್ದ ಭಾಷಣ ಪ್ರಸಕ್ತ ಜಾರಿಯಲ್ಲಿರಿವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆಯೆ?

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ಸಾಧನೆ ಕುರಿತಂತೆ ಬುಧವಾರ ಬೆಳಿಗ್ಗೆ ಮಾಡಿದ್ದ ಭಾಷಣ ಪ್ರಸಕ್ತ ಜಾರಿಯಲ್ಲಿರಿವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆಯೆ? ಇದನ್ನು ತೀರ್ಮಾನಿಸಲು ಚುನಾವಣಾ ಆಯೋಗದ ನೇತೃತ್ವದಲ್ಲಿ ಉಪಸಮಿತಿಯೊಂದು ರಚನೆಯಾಗಿದೆ.
ಮದರಿ ನೀತಿ ಸಂಹಿತೆಯಡಿಯಲ್ಲಿ ತಕ್ಷಣ ವಿಷಯವನ್ನು ಪರಿಶೀಲಿಸಬೇಕೆಂದು ಆಯೋಗವು ಸಮಿತಿಯ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ಹಾಗಿದ್ದರೂ ಸಹ ರಾಷ್ಟ್ರೀಯ ಭದ್ರತೆ, ಮತ್ತು ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವಿಚಾರಗಳು ಮಾದರಿ ನೀತಿ ಸಂಹಿತೆಯ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಕೆಲ ನುರಿತ ಚಿಂತಕರು ಅಭಿಪ್ರಾಯಪಟ್ಟಿದ್ದಾರೆ.
ದೇಶದಲ್ಲಿ ಮಾರ್ಚ್ 10ರಂದು ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾದಂದಿನಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಏಪ್ರಿಲ್ 11ರಿಂದ ಏಳು ಹಂತಗಳಲ್ಲಿ ಭಾರತದ ಸಂಸತ್ತಿಗೆ ಚುನಾವಣೆ ನಡೆಯಲಿದ್ದು ಮೇ 23ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.
ಸರ್ಕಾರದ "ಸಾಧನೆ" ಯನ್ನು ಹೈಲೈಟ್ ಮಾಡಿದ ಕಾರಣ ಪ್ರಧಾನಮಂತ್ರಿಯ ಭಾಷಣ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಅಲ್ಲದೆ ಭಾಷಣದಲ್ಲಿನ ವಿಚಾರವು ರಾಷ್ಟ್ರೀಯ ಭದ್ರತೆಗೆ ನೇರವಾಗಿ ಸಂಬಂಧಿಸಿಲ್ಲ ಎಂದೂ ಅವು ವಾದಿಸಿದೆ.
ಸಮಿತಿಗೆ ವರದಿ ನೀಡಲು ಅಂತಿಮ ಗಡುವನ್ನೇನೂ ನೀಡಿಲ್ಲವಾಗಿಯೂ ಅತಿ ಶೀಘ್ರವಾಗಿ ತನಿಖೆ ಪೂರ್ಣಗೊಳ್ಳಬೇಕು ಎಂದು ಮೂಲಗಳು ತಿಳಿಸಿದೆ.
ಬುಧವಾರ ಬೆಳಿಗ್ಗೆ ಭದ್ರತಾ ಸಲಹೆಗಾರರ ಕ್ಯಾಬಿನಟ್ ಸಭೆ ಬಳಿಕ ಪ್ರಧಾನಮಂತ್ರಿಯವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದರು. 'ನಮ್ಮ ವಿಜ್ಞಾನಿಗಳು ಬಾಹ್ಯಾಕಾಶದಲ್ಲಿ 300 ಕಿ.ಮೀ ದೂರ (ಎಲ್‌ಇಓ) (ಲೋ ಅರ್ಥ್ ಆರ್ಬಿಟ್)ದಲ್ಲಿರುವ ಸಕ್ರಿಯ ಉಪಗ್ರಹವನ್ನು ಹೊಡೆದುರುಳಿಸಿದ್ದಾರೆ. ಕೇವಲ 3 ನಿಮಿಷಗಳಲ್ಲಿ ಯಶಸ್ವಿಯಾಗಿ ಈ ಕಾರ್ಯಾಚರಣೆಯನ್ನು ವಿಜ್ಞಾನಿಗಳು ಯಶಸ್ವಿಗೊಳಿಸಿದ್ದಾರೆ. ಮಿಷನ್ ಶಕ್ತಿ ಎಂಬ ಅತ್ಯಂತ ಕಠಿಣ ಕಾರ್ಯಾಚರಣೆ ಇದಾಗಿತ್ತು. ಅತ್ಯಂತ ಹೆಚ್ಚು ವೆಚ್ಚ ಬಯಸುವ ಈ ಕಾರ್ಯಾಚರಣೆಯನ್ನು ಅತಿ ಕಡಿಮೆ ವೆಚ್ದದಲ್ಲಿ ನಮ್ಮ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ'. ಎಂದು ಅವರು ಹೇಳೀದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿElection Commissionಚುನಾವಣಾ ಆಯೋಗಲೋಕಸಭಾ ಚುನಾವಣೆLok Sabha pollsModel Code of Conductಮಾದರಿ ನೀತಿ ಸಂಹಿತೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


