ಕಾಶ್ಮೀರ: ಪುಲ್ವಾಮಾ ಮಾದರಿಯಲ್ಲಿ ದಾಳಿ ಯತ್ನ, ಸಿಆರ್‌ಪಿಎಫ್ ವಾಹನಕ್ಕೆ ಕಾರು ಡಿಕ್ಕಿ?
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾದಲ್ಲಿ ಆತ್ಮಾಹುತಿ ಉಗ್ರ ದಾಳಿಯಲ್ಲಿ 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು ಇದೀಗ ಇದೇ ರೀತಿಯ ಮತ್ತೊಂದು ಉಗ್ರ ದಾಳಿಗೆ ಭಯೋತ್ಪಾದಕರು ಯತ್ನ...

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾದಲ್ಲಿ ಆತ್ಮಾಹುತಿ ಉಗ್ರ ದಾಳಿಯಲ್ಲಿ 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು ಇದೀಗ ಇದೇ ರೀತಿಯ ಮತ್ತೊಂದು ಉಗ್ರ ದಾಳಿಗೆ ಭಯೋತ್ಪಾದಕರು ಯತ್ನ ನಡೆಸಿದ್ದಾರೆ.
ಜಮ್ಮು-ಶ್ರೀನಗರ ಹೆದ್ದಾರಿ ಬನಿಹಾಲ್ ನಲ್ಲಿ ಸಿಆರ್‌ಪಿಎಫ್ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದಿದ್ದು ನಂತರ ಸ್ಫೋಟ ಸಂಭವಿಸಿದೆ. ವಾಹನಕ್ಕೆ ಡಿಕ್ಕಿ ಹೊಡೆದ ಕೂಡಲೇ ಕಾರಿನ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.
ಸ್ಫೋಟದ ತೀವ್ರತೆ ಕಡಿಮೆ ಇದ್ದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಕಾರು ಚಾಲಕನ ಬಂಧನಕ್ಕೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದೆ. ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರCarಕಾರುterroristJammu & Kashmirblastಸ್ಫೋಟಭಯೋತ್ಪಾದಕರುಭಾರತೀಯ ಸೇನೆBanihalಬನಿಹಾಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


