ಏಪ್ರಿಲ್ 4ರಂದು ಸುಮಲತಾ ಅಂಬರೀಷ್ ಪರ ಎಸ್ಎಂ ಕೃಷ್ಣ ಪ್ರಚಾರ
ಮಂಡ್ಯ ಲೋಕಸಭಾ ಚುನಾವಣೆಯ ಅಖಾಡಕ್ಕೆ ಧುಮುಕಿದ ಮಾಜಿ ಮುಖ್ಯಮಂತ್ರಿ ಬಿಜೆಪಿ, ನಾಯಕ ಎಸ್ ಎಂ ಕೃಷ್ಣ ಅವರು ಏಪ್ರಿಲ್ 4ರಂದು ಪಕ್ಷೇತರ ಅಭ್ಯರ್ಥಿ...

Published On :
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯ ಅಖಾಡಕ್ಕೆ ಧುಮುಕಿದ ಮಾಜಿ ಮುಖ್ಯಮಂತ್ರಿ ಬಿಜೆಪಿ, ನಾಯಕ ಎಸ್ ಎಂ ಕೃಷ್ಣ ಅವರು ಏಪ್ರಿಲ್ 4ರಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಇಂದು ಕೇಂದ್ರ ಸಚಿವ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ ವಿ ಸದಾನಂದಗೌಡ ಅವರ ಪರ ಪ್ರಚಾರ ಮಾಡಿದ ಎಸ್ಎಂ ಕೃಷ್ಣ ಅವರು, ಪಕ್ಷದ ನಿರ್ದೇಶನದಂತೆ ತಾವು ಪ್ರಚಾರ ಮಾಡುತ್ತಿದ್ದು, ಏಪ್ರಿಲ್ 4ರಂದು ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.
ಜನ ಬಿಜೆಪಿಗೆ ಮತ ಹಾಕುವ ಮೂಲಕ ದೇಶದ ಅಭಿವೃದ್ಧಿಗೆ ದಾರಿ ಮಾಡಿಕೊಡಬೇಕು ಎಂದು ಮಾಜಿ ಸಿಎಂ ಮತದಾರರಿಗೆ ಮನವಿ ಮಾಡಿದರು.
ಸುಮಲತಾ ಅವರು ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ನಂತರ ಪಕ್ಷೇತರ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ವಿರುದ್ಧ ಸ್ಪರ್ಧಿಸಿದ್ದು, ಅವರಿಗೆ ಬಿಜೆಪಿ ಬೆಂಬಲ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


