ಫನಿ ಚಂಡಮಾರುತ: ಒಡಿಶಾದಲ್ಲಿ ಹಳದಿ ಅಲರ್ಟ್ ಘೋಷಣೆ, ತೀವ್ರ ಕಟ್ಟೆಚ್ಚರ
ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಡಮಾರುತ ಭೀಕರ ಸ್ವರೂಪ ಪಡೆಯುತ್ತಿದ್ದು, ಈಗಾಗಲೇ ಒಡಿಶಾ ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಒಡಿಶಾದಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

Published On :
ನವದೆಹಲಿ: ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಡಮಾರುತ ಭೀಕರ ಸ್ವರೂಪ ಪಡೆಯುತ್ತಿದ್ದು, ಈಗಾಗಲೇ ಒಡಿಶಾ ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಒಡಿಶಾದಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯ ಈಶಾನ್ಯ ಭಾಗದಲ್ಲಿ ರಚನೆಯಾಗಿರುವ ಫನಿ ಚಂಡಮಾರುತವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಸ್ತುತ ಗಂಟೆಗೆ 200 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಫನಿ ಒಡಿಶಾದತ್ತ ಧಾವಿಸುತ್ತಿದೆ. ಒಡಿಶಾದಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಬೌಧ್, ಕಲಾಹಂಡಿ, ಸಂಬಾಲ್ಪುರ, ಡಿಯೋಘಡ್ ಮತ್ತು ಸುಂದರ್ ಘಡ್ ನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೇ ಮೇ 3 ಶುಕ್ರವಾರಂದು ಫನಿ ಚಂಡಮಾರುತ ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಲಿದ್ದು, ಚಂಡಮಾರುತವನ್ನು ಎದುರಿಸಲು ಒಡಿಶಾ ಸಕಲ ವ್ಯವಸ್ಥೆಗಳನ್ನೂ ಮಾಡಿಕೊಂಡಿದೆ. ಒಡಿಶಾದಲ್ಲಿ ಎನ್ ಡಿಆರ್ ಎಫ್ ಪಡೆಗಳು ಸರ್ವ ಸನ್ನದ್ಧ ಸ್ಥಿತಿಯಲ್ಲಿವೆ. ಫನಿಯ ಕಾರಣಕ್ಕಾಗಿಯೇ ಒಡಿಶಾದಲ್ಲಿ 879 ವಿವಿಧೋದ್ದೇಶ ವಸತಿಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಹತ್ತು ಲಕ್ಷ ಜನರಿಗೆ ಏಕಕಾಲಕ್ಕೆ ಊಟ ವಸತಿ ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂತೆಯೇ ಕರಾವಳಿ ಭಾಗದ ರೈಲು ಮಾರ್ಗಗಳಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ.
ಒಡಿಶಾ ಮಾತ್ರವಲ್ಲದೇ ತಮಿಳುನಾಡು, ಆಂಧ್ರ ಪ್ರದೇಶದ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗಗಳಲ್ಲಿಯೂ ತೀವ್ರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಮೂರೂ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


