ದೇಶ

ಸೆಲೆಬ್ರಿಟಿಗಳ ಮದುವೆಗೆ ಹೋಗುವ ಬದಲು ಪ್ರಧಾನಿ ರೈತರ ಮನೆಗೆ ಭೇಟಿ ನೀಡಲಿ: ತೇಜಸ್ವಿ ಯಾದವ್

ದೇಶದ ಸೆಲೆಬ್ರಿಟಿಗಳ ಮದುವೆಗೆ ಹೋಗುವ ಬದಲು ಪ್ರಧಾನಿ ನರೇಂದ್ರ ಮೋದಿ ರೈತರ ಮನೆಗೆ ತೆರಳಿ ಅವರ ಕಷ್ಟ ಸುಖ ವಿಚಾರಿಸಲಿ ಎಂದು ಆರ್ ಜೆಡಿ ನಾಯಕ ತೇಜಸ್ವಿ ...

ಸೆಲೆಬ್ರಿಟಿಗಳ ಮದುವೆಗೆ ಹೋಗುವ ಬದಲು ಪ್ರಧಾನಿ ರೈತರ ಮನೆಗೆ ಭೇಟಿ ನೀಡಲಿ: ತೇಜಸ್ವಿ ಯಾದವ್
ತೇಜಸ್ವಿ ಯಾದವ್
Published On :
ಪಾಟ್ನಾ: ದೇಶದ ಸೆಲೆಬ್ರಿಟಿಗಳ ಮದುವೆಗೆ ಹೋಗುವ ಬದಲು ಪ್ರಧಾನಿ ನರೇಂದ್ರ ಮೋದಿ ರೈತರ ಮನೆಗೆ ತೆರಳಿ ಅವರ ಕಷ್ಟ ಸುಖ ವಿಚಾರಿಸಲಿ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ಪ್ರಿಯಾಂಕಾ ಚೋಪ್ರಾ ಅವರಂತಹ ಮದುವೆಗಳಿಗೆ ಹಾಜರಾಗುವ ಬದಲು ರೈತರ ಕಷ್ಟ ಸುಖ ಕೇಳಲಿ ಎಂದು ಹೇಳಿದ್ದಾರೆ.
ಮೋದಿ ಅವರಿಗೆ ದೇಶಕ್ಕೆ ಪ್ರಧಾನಿಯಾಗಲು ಅರ್ಹರಲ್ಲ, ಅವರ ತಮ್ಮ ಘನತೆಗೆ ತಕ್ಕನಾಗಿ ನಡೆದುಕೊಳ್ಳುತ್ತಿಲ್ಲ, ಸುಮ್ಮನೆ ನಮ್ಮ ಕುಟುಂಬದ ಬಗ್ಗೆ ಮಾತನಾಡಿ ಸಮಯ ಹಾಳು ಮಾಡುವ ಬದಲು ಅದೇ ಸಮಯವನ್ನು ದೇಶದ ಅಭಿವೃದ್ಧಿಗಾಗಿ ಬಳಸಲಿ, ನಿರುದ್ಯೋಗ, ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೋದಿ ಕೆಲಸ ಮಾಡಲಿ, ಬಿಹಾರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲಿ ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.