ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗುವುದಿಲ್ಲ: ಮಂಡಳಿ ಸ್ಪಷ್ಟನೆ
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯಸಿಬಿಎಸ್ ಇ) 10ನೇ ತರಗತಿ ಫಲಿತಾಂಶ ಭಾನುವಾರ ...

Published On :
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯಸಿಬಿಎಸ್ ಇ) 10ನೇ ತರಗತಿ ಫಲಿತಾಂಶ ಭಾನುವಾರ ಪ್ರಕಟವಾಗುತ್ತಿಲ್ಲ, ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂದು ಸಿಬಿಎಸ್ಐ ತಿಳಿಸಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಸಿಬಿಎಸ್ಇಯ ಸಾರ್ವಜನಿಕ ಸಂಪರ್ಕಾಧಿಕಾರಿ ರಮಾ ಶರ್ಮಾ, ಸಿಬಿಎಸ್ಇಯ 10ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗುವುದಿಲ್ಲ. ಈ ಮೂಲಕ ವಿದ್ಯಾರ್ಥಿಗಳು, ಶಾಲೆಯ ಪ್ರಾಂಶುಪಾಲರು ಮತ್ತು ಸಾರ್ವಜನಿಕರಿಗೆ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಹೇಳಲಿಚ್ಛಿಸುತ್ತೇವೆ ಎಂದಿದ್ದಾರೆ.
ಅಧಿಕೃತವಾಗಿ ಮುಂದಿನ ದಿನಗಳಲ್ಲಿ 10ನೇ ತರಗತಿ ಫಲಿತಾಂಶ ಯಾವಾಗ ಪ್ರಕಟವಾಗುತ್ತದೆ ಎಂದು ತಿಳಿಸುತ್ತೇವೆ ಎಂದು ಸಹ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


