ಪುಣ್ಯ ಸ್ಮರಣೆ: ಟಿಪ್ಪು ಸುಲ್ತಾನ್ ಶೌರ್ಯವನ್ನು ಶ್ಲಾಘಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತದ ದೊರೆ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ರನ್ನು ಹಾಡಿ ಹೊಗಳಿದ್ದಾರೆ.

Published On :
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತದ ದೊರೆ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ರನ್ನು ಹಾಡಿ ಹೊಗಳಿದ್ದಾರೆ.
ಮೇ 4ರಂದು ಟಿಪ್ಪು ಸುಲ್ತಾನ್ ರ ಪುಣ್ಯತಿಥಿಯಾಗಿದ್ದು, ಈ ಕುರಿತಂತೆ ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಇಂದು ಮೇ 4. ಟಿಪ್ಪು ಸುಲ್ತಾನ್ ರ ಪುಣ್ಯತಿಥಿ. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸ್ವಾತಂತ್ರ್ಯಕ್ಕಾಗಿಯೇ ಪ್ರಾಣ ಬಿಟ್ಟ ವೀರ ಯೋಧ. ಗುಲಾಮಗಿರಿಯಲ್ಲಿ ಬದುಕುವುದಕ್ಕಿಂತ ಸ್ವತಂತ್ರವಾಗಿ ತಲೆ ಎತ್ತಿ ಬದುಕಬೇಕು ಎಂಬ ಮಹತ್ ಸಂದೇಶ ಸಾರಿದಾತ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಟಿಪ್ಪು ಕುರಿತಂತೆ ಇಮ್ರಾನ್ ಹೇಳಿಕೆ ಇದೇ ಮೊದಲೇನಲ್ಲ... ಈ ಹಿಂದೆಯೂ ಕೂಡ ಇಮ್ರಾನ್ ಖಾನ್ ಪಾಕಿಸ್ತಾನ ಸಂಸತ್ ನಲ್ಲಿ ಟಿಪ್ಪು ಕುರಿತು ಉಲ್ಲೇಖ ಮಾಡಿದ್ದರು. 'ಪಾಕಿಸ್ತಾನವು ಯುದ್ಧ ಸನ್ನಿವೇಶವನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದೆ. ಈ ಪ್ರಯತ್ನವನ್ನು ಪಾಕಿಸ್ತಾನದ ದೌರ್ಬಲ್ಯ ಎಂದು ಭಾವಿಸಬಾರದು. ಇತಿಹಾಸವನ್ನು ನೋಡಿದರೆ ನಮಗೆ ಇಬ್ಬರು ಬಾದ್ ಶಾಗಳು ಕಾಣುತ್ತಾರೆ. ಒಂದು ಕಡೆ ಬಹದ್ದೂರ್ ಷಾ ಜಫರ್ (ಕೊನೆಯ ಮೊಘಲ್ ದೊರೆ) ಮತ್ತು ಇನ್ನೊಂದು ಕಡೆ ಟಿಪ್ಪುಸುಲ್ತಾನ್. ಯುದ್ಧ ಅಥವಾ ಗುಲಾಮಿತನದಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾದ ಸನ್ನಿವೇಶ ಎದುರಾದಾಗ ಬಹದ್ದೂರ್ ಷಾ ಜಫರ್ ಗುಲಾಮಿತನವನ್ನು ಆಯ್ದುಕೊಂಡರು. ಉಳಿದ ಜೀವನವನ್ನು ಗುಲಾಮನಾಗಿಯೇ ಕಳೆದರು. ಟಿಪ್ಪುಸುಲ್ತಾನ್ ಗೂ ಕೂಡಾ ಇಂತಹದ್ದೊಂದು ಆಯ್ಕೆಯ ತೀರ್ಮಾನ ಕೈಗೊಳ್ಳಬೇಕಾದ ಸಮಯ ಬಂದಿತ್ತು. ಗುಲಾಮನಾಗಿ ಬದುಕು ಸವೆಸುವ ಅಥವಾ ಸ್ವತಂತ್ರನಾಗಿ, ಕೊನೆಯುಸಿರು ಇರುವ ತನಕ ಹೋರಾಡುವುದು ಇದರಲ್ಲಿ ಒಂದು ತೀರ್ಮಾನವನ್ನು ಟಿಪ್ಪುಸುಲ್ತಾನ್ ಕೈಗೊಳ್ಳಬೇಕಿತ್ತು. ಈ ವೇಳೆ ಯುದ್ಧ ಮಾಡಿದ ಟಿಪ್ಪುಸುಲ್ತಾನ್ ಈ ನೆಲದ ಹೀರೋ’ ಎಂದು ಇಮ್ರಾನ್ ಖಾನ್ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


