ಫೋನಿ ಚಂಡಮಾರುತ: ಹಾನಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಕರೆಯನ್ನು ಸ್ವೀಕರಿಸದ ಮಮತಾ!
ಫೋನಿ ಚಂಡಮಾರುತ ಒಡಿಶಾದ ಬಳಿಕ ಪಶ್ಚಿಮ ಬಂಗಾಳದಲ್ಲೂ ಭಾರೀ ಅನಾಹುತ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಚಂಡಮಾರುತದ ಹಾನಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ...

Published On :
ನವದೆಹಲಿ: ಫೋನಿ ಚಂಡಮಾರುತ ಒಡಿಶಾದ ಬಳಿಕ ಪಶ್ಚಿಮ ಬಂಗಾಳದಲ್ಲೂ ಭಾರೀ ಅನಾಹುತ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಚಂಡಮಾರುತದ ಹಾನಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಮಮತಾ ಬ್ಯಾನರ್ಜಿಗೆ ಕರೆ ಮಾಡಿದ್ದರೂ ಮಮತಾ ಕರೆಯನ್ನು ಸ್ವೀಕರಿಸಿಲ್ಲ ಅಲ್ಲದೆ ಮರು ಕರೆಯನ್ನೂ ಮಾಡಿಲ್ಲವಂತೆ.
ನಂತರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು ಎಂದು ಉನ್ನತ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಎಂ ಮಮತಾ ಬ್ಯಾನರ್ಜಿಯನ್ನು ಸಂಪರ್ಕಿಸಲು ಪ್ರಧಾನಿ ಮೋದಿ ಅವರ ಸಿಬ್ಬಂದಿ ಎರಡು ಬಾರಿ ಪ್ರಯತ್ನಿಸಿದರು. ಎರಡೂ ಬಾರಿ ಮರು ಕರೆ ಮಾಡಲಾಗುವುದು ಎಂದು ಹೇಳಿದರು. ಮತ್ತೊಂದು ಸಲ ಕರೆ ಮಾಡಿದಾಗ ಮುಖ್ಯಮಂತ್ರಿಗಳು ಪ್ರವಾಸದಲ್ಲಿದ್ದಾರೆ ಎಂದು ತಿಳಿಸಿದರು ಎಂದು ಅಧಿಕಾರಿ ಹೇಳಿದರು.
ಇನ್ನು ತೃಣಮೂಲ ಕಾಂಗ್ರೆಸ್ ಚಂಡಮಾರುತ ಹಾವಳಿಯಿಂದ ಉಂಟಾದ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಮಾತನಾಡುತ್ತಿಲ್ಲ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಪಶ್ಚಿಮ ಬಂಗಾಳWest BengalMamata Banerjeeಮಮತಾ ಬ್ಯಾನರ್ಜಿCyclone Faniಫೋನಿ ಚಂಡಮಾರುತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


