ನನ್ನ ತಂದೆಯನ್ನು ಎಳೆದು ತಂದು ಉಳಿಯಲಾರಿರಿ, ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ: ರಾಹುಲ್ ತಿರುಗೇಟು
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಬದುಕು ಭ್ರಷ್ಟಾಚಾರಿ ನಂಬರ್1 ಎಂಬ ಹಣೆ ಪಟ್ಟಿಯೊಂದಿಗೆ ಅಂತ್ಯವಾಗಿತ್ತು ಎಂಬ ಪ್ರಧಾನಿ ನರೇಂದ್ರ ಮೋದಿ ...

Published On :
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಬದುಕು ಭ್ರಷ್ಟಾಚಾರಿ ನಂಬರ್1 ಎಂಬ ಹಣೆ ಪಟ್ಟಿಯೊಂದಿಗೆ ಅಂತ್ಯವಾಗಿತ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.
ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ, ನನ್ನ ತಂದೆಯನ್ನು ಎಳೆದು ತಂದು ನೀವು ಉಳಿಯಲಾರಿರಿ,, ನಮ್ಮ ತಂದೆ ನಿಮ್ಮನ್ನು ರಕ್ಷಿಸಲಾರರು, ನಿಮಗೆ ನನ್ನ ಅಪಾರ ಪ್ರೀತಿ ಮತ್ತು ದೊಡ್ಡ ಅಪ್ಪುಗೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರೇ 1980 ರಲ್ಲಿ ಪ್ರಧಾನಿಯಾಗಿದ್ದ ಕಾಲದಲ್ಲಿ ಬೋಪೋರ್ಸ್ ಹಗರಣ ನಡೆದಿತ್ತು, ಸೈನ್ಯಕ್ಕೆ ರಕ್ಷಣಾ ಸಾಮಾಗ್ರಿಗಳನ್ನು ಪೂರೈಸುವ ಸ್ವೀಡೀಶ್ ಮೂಲದ ಬೋಪೋರ್ಸ್ ಕಂಪನಿಯಿಂದ ರಾಜೀವ್ ಗಾಂಧಿ ದೊಡ್ಡ ಮೊತ್ತದ ಹಣವನ್ನು ಕಮಿಷನ್ ರೂಪದಲ್ಲಿ ಪಡೆದಿದ್ದರು. ಈ ಮೂಲಕ ನಂಬರ್ 1 ಭ್ರಷ್ಟಾಚಾರಿ ಎಂಬ ಹಣೆ ಪಟ್ಟಿಯೊಂದಿಗೆ ಅವರ ಬದುಕು ಅಂತ್ಯವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ರ್ಯಾಲಿಯೊಂದರಲ್ಲಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿRajiv Gandhiರಾಜೀವ್ ಗಾಂಧಿRahul Gandhiರಾಹುಲ್ ಗಾಂಧಿKamaಕರ್ಮCorrupt No 1ಭ್ರಷ್ಟಾಚಾರಿ ನಂ.1
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


