ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ ಇ)ಯ 11ನೇ ತರಗತಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ.

Published On :
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ ಇ)ಯ 11ನೇ ತರಗತಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ದೇಶಾದ್ಯಂತ ಒಟ್ಟಾರೆ ಶೇ.91.10ರಷ್ಟು ಫಲಿತಾಂಶ ಹೊರಬಿದ್ದಿದೆ.
ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಬಾಲಕರಿಗಿಂತ ಶೇ.2.31ರಷ್ಟು ಹೆಚ್ಚು ಫಲಿತಾಂಶ ಗಳಿಸಿದ್ದಾರೆ. ಶೇ.92.42ರಷ್ಟು ಬಾಲಕಿಯರು ತೇರ್ಗಡೆ ಹೊಂದಿದ್ದರೆ, ಶೇ.90.14ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ.
ತುಮಕೂರಿನ ವಿದ್ಯಾ ವಾರಿಧಿ ಅಂತಾರಾಷ್ಟ್ರೀಯ ಶಾಲೆಯ ಯಶಸ್ ಡಿ ಅವರು ರಾಜ್ಯದಲ್ಲಿ ಮಾತ್ರವಲ್ಲ ಚೆನ್ನೈ ಪ್ರದೇಶದಲ್ಲಿ ಕೂಡ ಪ್ರಥಮ ಸ್ಥಾನ ಗಳಿಸಿದ್ದಾರೆ. 5 ಒಟ್ಟಾರೆ ಫಲಿತಾಂಶದ ಪಟ್ಟಿಯಲ್ಲಿ ಯಶಸ್ 32ನೇ ಶ್ರೇಯಾಂಕ ಗಳಿಸಿದ್ದಾರೆ.
ಧಾರವಾಡದ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ನ ಗಿರಿಜಾ ಎಂ. ಹೆಗ್ಡೆ ಅವರು 497 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ 44ನೇ ಸ್ಥಾನ ಗಳಿಸಿದ್ದಾರೆ.
ಬೆಂಗಳೂರು ಪ್ರೆಸೆಡೆನ್ಸಿ ಶಾಲೆಯ ಐಶ್ವರ್ಯ ಹರಿಹರನ್ ಐಯ್ಯರ್ ಹಾಗೂ ನಾಲದಾಳ ದಿಶಾ ಚೌದರಿ ಅವರು ಕೂಡ 497 ಅಂಕಗಳಿಸಿ ಎರಡನೇ ಸ್ಥಾನಗಳಿಸಿದ್ದು, ರಾಷ್ಟ್ರಮಟ್ಟದಲ್ಲಿ 50 ಹಾಗೂ 51ನೇ ಶ್ರೇಯಾಂಕದಲ್ಲಿದ್ದಾರೆ.
ಸಿಬಿಎಸ್ ಇ ಪರೀಕ್ಷಾ ಮಂಡಳಿಯ 10 ಪ್ರದೇಶಗಳ ಪೈಕಿ ಕರ್ನಾಟಕವನ್ನೊಳಗೊಂಡ ಚೆನ್ನೈ ಪ್ರದೇಶ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ.
ಕಳೆದ ಫೆಬ್ರವರಿ 15ರಿಂದ ಏಪ್ರಿಲ್ 14ರವರೆಗೆ ನಡೆದಿದ್ದ ಸಿಬಿಎಸ್ ಇ ಶಾಲೆಗಳ 10ನೇ ತರಗತಿಯ ಪರೀಕ್ಷೆಗೆ ಒಟ್ಟು 17.61 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 16.04 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಫಲಿತಾಂಶದಲ್ಲಿ ಶೇ.4.40ರಷ್ಟು ಹೆಚ್ಚಳ ಕಂಡುಬಂದಿದೆ. ಕಳೆದ ವರ್ಷ ಶೇ.86.70ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರು.
ತಿರುವನಂತಪುರ ಶೇ. 99.85ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಗಳಿಸಿದೆ. ಕ್ರಮವಾಗಿ ಚೆನ್ನೈ (ಶೇ.99), ಅಜ್ಮೀರ್ (ಶೇ.95.89), ಪಂಚಕುಲ (ಶೇ.93.72), ಪ್ರಯಾಗ್ ರಾಜ್ (ಶೇ.92.55) ಭುವನೇಶ್ವರ (ಶೇ.92.32), ಪಾಟನಾ (91.86) ಡೆಹ್ರಾಡೂನ್ (ಶೇ.89.04), ದೆಹಲಿ (ಶೇ.80.97), ಗುವಾಹತಿ (ಶೇ.74.49) ರಾಜ್ಯಗಳು ಅತಿ ಹೆಚ್ಚು ಫಲಿತಾಂಶ ಗಳಿಸಿದ ಮೊದಲ ಹತ್ತು ರಾಜ್ಯಗಳಾಗಿವೆ. ದೇಶಾದ್ಯಂತ 4974 ಶಾಲೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
ಸಿಬಿಎಸ್ ಇ ಹತ್ತನೇ ತರಗತಿ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಗಳಾದ cbse.nic.in ಮತ್ತು cbseresutls.nic.in ನಲ್ಲಿ ಫಲಿತಾಂಶ ನೋಡಬಹುದಾಗಿದೆ.
ಕಳೆದ ವಾರ ಮೇ 2 ರಂದು ಸಿಬಿಸಿಇ ಮಂಡಳಿ 12 ತರಗತಿಯ ಫಲಿತಾಂಶವನ್ನು ಪ್ರಕಟಿಸಿತ್ತು. ಶೇ. 83.4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. 2018ರಲ್ಲಿ ಶೇ. 83.01 ಫಲಿತಾಂಶ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


