ಇಬ್ಬರು ಎಐಎಡಿಎಂಕೆ ಶಾಸಕರ ಅನರ್ಹತೆಗೆ ಸುಪ್ರೀಂ ಕೋರ್ಟ್ ತಡೆ
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದ ಮೇಲೆ ತಮಿಳುನಾಡು ವಿಧಾನಸಭೆ ಸ್ಪೀಕರ್ ಅವರಿಂದ ಅನರ್ಹತೆ ನೊಟೀಸ್ ಪಡೆದಿದ್ದ ಇಬ್ಬರು ಎಐಎಡಿಎಂಕೆ...

Published On :
ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದ ಮೇಲೆ ತಮಿಳುನಾಡು ವಿಧಾನಸಭೆ ಸ್ಪೀಕರ್ ಅವರಿಂದ ಅನರ್ಹತೆ ನೊಟೀಸ್ ಪಡೆದಿದ್ದ ಇಬ್ಬರು ಎಐಎಡಿಎಂಕೆ ಶಾಸಕರ ಅನರ್ಹತೆ ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ಅನರ್ಹತೆ ಪ್ರಶ್ನಿಸಿ ಎಐಎಡಿಎಂಕೆ ಶಾಸಕರಾದ ವಿ ಟಿ ಕಲೈಸೆಲ್ವನ್ ಮತ್ತು ಇ ರತ್ನಸಭಾಪತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು, ಅನರ್ಹತೆ ಕ್ರಮಕ್ಕೆ ತಡೆ ನೀಡಿದ್ದಾರೆ.
ಎಎಂಎಂಕೆ ನಾಯಕ ಟಿಟಿವಿ ದಿನಕರನ್ ಜತೆ ಗುರುತಿಸಿಕೊಂಡಿದ್ದ ಶಾಸಕರಾದ ಎ ಪ್ರಭು ಕಲೈಸೆಲ್ವನ್ ಮತ್ತು ಇ ರತ್ನಸಭಾಪತಿ ಅವರಿಗೆ ಕಳೆದ ಏಪ್ರಿಲ್ 30ರಂದು ಪಕ್ಷಾಂತರ ನಿಷೇಧ ಕಾನೂನಿನಡಿ ಸ್ಪೀಕರ್ ಪಿ ಧನಪಾಲ್ ಅವರು ಅನರ್ಹತೆ ನೊಟೀಸ್ ಜಾರಿಮಾಡಿದ್ದರು. ಮೂವರು ಶಾಸಕರ ಪೈಕಿ ಇಬ್ಬರು ಶಾಸಕರು ಸ್ಪೀಕರ್ ನೋಟಿಸ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


