ಲೈಂಗಿಕ ಕಿರುಕುಳ ಪ್ರಕರಣ: ಸಿಜೆಐ ರಂಜನ್ ಗೊಗೋಯ್ ಆರೋಪ ಮುಕ್ತ
ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದತೆ ಸುಪ್ರೀಂ ಕೋರ್ಟ್ ಆಂತರಿಕ ವಿಚಾರಣಾ ಸಮಿತಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ....

Published On :
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದತೆ ಸುಪ್ರೀಂ ಕೋರ್ಟ್ ಆಂತರಿಕ ವಿಚಾರಣಾ ಸಮಿತಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಆರೋಪ ಆಧಾರ ರಹಿತ ಎಂದು ವರದಿ ನೀಡಿದೆ.
ಸಿಜೆಐ ವಿರುದ್ಧ ಸುಪ್ರೀಂ ಕೋರ್ಟ್ ಮಾಜಿ ಉದ್ಯೋಗಿಯೊಬ್ಬರು ಮಾಡಿದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡಿ ಆಂತರಿಕ ವಿಚಾರಣಾ ಸಮಿತಿ ಮೇ 5ರಂದು ವರದಿ ಸಲ್ಲಿಸಿದ್ದು, ಮಹಿಳೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರದ್ದುಗೊಳಿಸಿದೆ.
ವಜಾಗೊಂಡಿದ್ದ ನ್ಯಾಯಾಂಗ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ಮುಖ್ಯ ನ್ಯಾಯಮೂರ್ತಿಗಳು ಈ ಆರೋಪವನ್ನು ತಿರಸ್ಕರಿಸಿದ್ದರು. ಹಾಗಿದ್ದರೂ ನ್ಯಾಯಾಂಗದ ಘನತೆಯನ್ನು ಎತ್ತಿ ಹಿಡಿಯುವುದಕ್ಕಾಗಿ ಜಸ್ಟಿಸ್ ಎಸ್.ಎ ಬೊಬ್ಡೆ ನೇತೃತ್ವದ ತ್ರಿಸದಸ್ಯ ಆಂತರಿಕ ವಿಚಾರಣಾ ಸಮಿತಿಯ ಮೂಲಕ ಆರೋಪದ ಕುರಿತು ತನಿಖೆ ನಡೆಸಲಾಗಿತ್ತು.
ಇದೀಗ ಈ ಸಮಿತಿ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ಅವರನ್ನು ಆರೋಪಮುಕ್ತಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


