ಮೋದಿ ಕೌಂಟ್ ಡೌನ್ ಆರಂಭ: ಕ್ರೂರ ಐದು ವರ್ಷಗಳು ಅಂತ್ಯ: ಸಲ್ಮಾನ್ ಖುರ್ಷಿದ್
ಪ್ರಧಾನಿ ನರೇಂದ್ರ ಮೋದಿ ಅವರ ಕೌಂಟ್ ಡೌನ್ ಆರಂಭವಾಗಿದ್ದು, ಮೋದಿಯ ಐದು ವರ್ಷದ ಭಯಾನಕ ಆಡಳಿತ ಅಂತ್ಯವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕೌಂಟ್ ಡೌನ್ ಆರಂಭವಾಗಿದ್ದು, ಮೋದಿಯ ಐದು ವರ್ಷದ ಭಯಾನಕ ಆಡಳಿತ ಅಂತ್ಯವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಸರ್ಕಾ ಸೋಲನುಭವಿಸುವುದು ಖಚಿತ, ಭಾರತೀಯ ಪ್ರಜಾಪ್ರಭುತ್ವ ಮತ್ತು ಆತ್ಮ ಸಾಕ್ಷಿಯ ಸ್ವಾತಂತ್ರ್ಯಕ್ಕೆ ವಿಷ ಮಿಶ್ರಣವಾಗುತ್ತಿದೆ,. ಸೈನಿಕರ ಯುದ್ದ ಭೂಮಿಮೇಲೆ ನಿಂತು, ಅವರ ವಿರುದ್ದವೇ ಮೋದಿ ಮಾತನಾಡುತ್ತಾರೆ ಎಂದು ಸಲ್ಮಾನ್ ಖುರ್ಷಿದ್ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಇನ್ನೂ ಕೇವಲ 16 ದಿನಗಳು ಮಾತ್ರಸ, ಮುಳುಗುತ್ತಿರುವ ಹಡಗಿವಿಂದ ಇಲಿಗಳು ನೆಗೆಯುತ್ತವೆ, ಐದು ವರ್ಷದ ಕ್ರೂರ ಆಡಳಿತ ಅಂತ್ಯಗೊಳ್ಳುತ್ತದೆ, ಜೈ ಹೋ ಡೆಮಾಕ್ರಸಿ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
ಇನ್ನೂ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಕುರಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆಯ ವಿರುದ್ಧ ಕಾಂಗ್ರೆಸ್, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಈ ವಿಷಯ ಕುರಿತಂತೆ ಪಕ್ಷದ ನಾಯಕರಾದ ಅಭಿಷೇಕ್ ಮನು ಸಿಂಘ್ವಿ ಮತ್ತು ಸಲ್ಮಾನ್ ಖುರ್ಷಿದ್ ನೇತೃತ್ವದ ನಿಯೋಗ ದೆಹಲಿಯಲ್ಲಿ ಚುನಾವಣಾ ಆಯೋಗವನ್ನು ಭೇಟಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿSalman Khurshidಸಲ್ಮಾನ್ ಖುರ್ಷಿದ್ಲೋಕಸಭೆ ಚುನಾವಣೆCountdownಕೌಂಟ್ ಡೌನ್Loksabhe Polls
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


