ಕೌಟುಂಬಿಕ ದೌರ್ಜನ್ಯ ಪ್ರಕರಣ: ಆಪ್ ಶಾಸಕ ಸೋಮನಾಥ್ ಭಾರ್ತಿ ವಿರುದ್ಧದ ಎಫ್ಐಆರ್ ರದ್ದು
ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಕಾನೂನು ಸಚಿವ ಹಾಗೂ ಆಪ್ ಶಾಸಕ ಸೋಮನಾಥ್ ಭಾರ್ತಿ ಅವರ...

Published On :
ನವದೆಹಲಿ: ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಕಾನೂನು ಸಚಿವ ಹಾಗೂ ಆಪ್ ಶಾಸಕ ಸೋಮನಾಥ್ ಭಾರ್ತಿ ಅವರ ವಿರುದ್ಧದ ಎಫ್ಐಆರ್ ಅನ್ನು ದೆಹಲಿ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
ನನ್ನ ಹಾಗೂ ಪತ್ನಿ ಲಿಪಿಕಾ ಮಿತ್ರಾ ನಡುವಿನ ಸಮಸ್ಯ ಇತ್ಯರ್ಥವಾಗಿದ್ದು, ಈಗ ನಾವು ಇಬ್ಬರು ಸಂತೋಷವಾಗಿ ಸಹಬಾಳ್ವೆ ನಡೆಸುತ್ತಿದ್ದು, ನನ್ನ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂಬ ಆರೋಪಿ ಸೋಮನಾಥ್ ಭಾರ್ತಿ ಅವರ ಮನವಿಯನ್ನು ನ್ಯಾಯಮೂರ್ತಿ ಚಂದ್ರಶೇಖರ್ ಅವರು ಪುರಸ್ಕರಿಸಿದ್ದಾರೆ.
ಇದೇ ವೇಳೆ ಆಪ್ ಶಾಸಕನ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಮಹಿಳೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂಬುದನ್ನು ಸಹ ಕೋರ್ಟ್ ಗಮನಕ್ಕೆ ತರಲಾಯಿತು.
ಲಿಪಿಕಾ ಅವರು 2015 ರ ಜೂ.10 ರಂದು ಪತಿ ಸೋಮನಾಥ್ ಭಾರ್ತಿ ಅವರ ವಿರುದ್ಧ ದೂರು ನೀಡಿದ್ದರು. ಈ ಸಂಬಂಧ ಅವರನ್ನು ಪೊಲೀಸರು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


