ಐಸಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟ, ಬೆಂಗಳೂರಿನ ವಿಭಾ ದೇಶಕ್ಕೆ ಪ್ರಥಮ
ಭಾರತೀಯ ಪ್ರೌಢ ಶಿಕ್ಷಣ ಪ್ರಮಾಣಪತ್ರ(ಐಸಿಎಸ್‌ಇ) 10ನೇ ತರಗತಿ ಹಾಗೂ 12ನೇ ತರಗತಿಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು,.....

Published On :
ನವದೆಹಲಿ: ಭಾರತೀಯ ಪ್ರೌಢ ಶಿಕ್ಷಣ ಪ್ರಮಾಣಪತ್ರ(ಐಸಿಎಸ್‌ಇ) 10ನೇ ತರಗತಿ ಹಾಗೂ 12ನೇ ತರಗತಿಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
12ನೇ ತರಗತಿಯ ಐಎಸ್‌ಸಿ ಪರೀಕ್ಷೆಯಲ್ಲಿ ಇದೇ ಮೊದಲ ಬಾರಿಗೆ ಇಬ್ಬರು ವಿದ್ಯಾರ್ಥಿಗಳು ಶೇ.100 ರಷ್ಟು ಅಂಕ ಪಡೆದಿದ್ದು, ಬೆಂಗಳೂರಿನ ವಿಭಾ ಸ್ವಾಮಿನಾಥನ್(ಹ್ಯೂಮಾನಿಟೀಸ್ ವಿಭಾಗದಲ್ಲಿ) 12ನೇ ತರಗತಿಯ ಐಎಸ್‌ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದುಕೊಂಡು ದೇಶದಲ್ಲೇ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇಂಗ್ಲಿಷ್ ಹಾಗೂ ಇತರೆ ಮೂರು ಆಯ್ದ ಉತ್ತಮ ವಿಷಯಗಳಲ್ಲಿ ಈಕೆ 400 ಕ್ಕೆ 400 ಅಂಕಗಳಿಸಿ ಶೇ. 100ರಷ್ಟು ಅಂಕಗಳಿಸಿದ್ದಾಳೆ. ವಿಭಾ ಬೆಂಗಳೂರಿನ ಮಲ್ಯ ಅದಿತಿ ಶಾಲೆಯ ವಿದ್ಯಾರ್ಥಿನಿ.
ಇನ್ನು ವಿಜ್ಞಾನ ವಿಭಾಗದಲ್ಲಿ ಕೋಲ್ಕತದ ದೇವಾಂಗ್ ಕುಮಾರ್ ಅಗರ್ವಾಲ್ ಸಹ ಶೇ. 100ರಷ್ಟು ಅಂಕ ಗಳಿಸಿದ್ದು, ಅಗ್ರ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಐಸಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಬೆಂಗಳೂರಿನ ವಾಣಿ ಪಬ್ಲಿಕ್ ಶಾಲೆಯ ವಿ.ಸಾಧನಾ ಶೇ. 99.20 ರಷ್ಟು ಅಂಕಗಳಿಸಿದ ಸಾಧನೆ ಮಾಡಿದ್ದು, ದೇಶದಲ್ಲಿ ಮೂರನೇ ಸ್ಥಾನ ಹಾಗೂ ಕರ್ನಾಟಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾಳೆ.
ರಾಜ್ಯದ ಐವರು ಟಾಪರ್‌ಗಳ ವಿವರ
1. ವಿ.ಸಾಧನಾ - ಶೇ. 99.20
2. ನಿತಿನ್ ಅರವಿಂದ್ ಬೀರೂರು - ಶೇ. 99.00
3.ಅನಘ ಎಚ್.ಸಿ - ಶೇ. 99.00
4.ಸಾನಾ ದತ್ - ಶೇ. 99.00
5.ನಿತ್ಯ ಅಗರ್ವಾಲಾ - ಶೇ. 99.00
ಐಸಿಎಸ್‌ಇ ಪರೀಕ್ಷೆಯಲ್ಲಿ ರಾಜ್ಯದ 18,217 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ ಶೇ. 99.77 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇ. 99.89 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದರೆ, ಬಾಲಕರು ಶೇ. 99.65 ರಷ್ಟು ತೇರ್ಗಡೆ ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


