ನ್ಯಾಯಮೂರ್ತಿ ಗವಾಯ್, ಕಾಂತ್ ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಹುದ್ದೆಗೆ ಪದೋನ್ನತಿ: ಕೊಲಿಜಿಯಂ ಶಿಫಾರಸು
ಹೈಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯ್ ಮತ್ತು ಸೂರ್ಯಕಾಂತ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳನ್ನಾಗಿ...

Published On :
ನವದೆಹಲಿ: ಹೈಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯ್ ಮತ್ತು ಸೂರ್ಯಕಾಂತ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳನ್ನಾಗಿ ಪದೋನ್ನತಿ ನೀಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
ನ್ಯಾಯಮೂರ್ತಿ ಗವಾಯ್ ಅವರು ಪ್ರಸ್ತುತ ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರಾಗಿದ್ದಾರೆ.ಇನ್ನು ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಹಿಮಾಚಲ ಪ್ರದೇಶ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿದ್ದಾರೆ.
ಸುಪ್ರೀಂ ಕೋರ್ಟ್ ನ ವೆಬ್ ಸೈಟ್ ನಲ್ಲಿ ಕೊಲಿಜಿಯಂ ಶಿಫಾರಸುಗಳನ್ನು ಅಪ್ ಲೋಡ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ರಂಜನ್ ಗೊಗೊಯ್ ನೇತೃತ್ವದ ಕೊಲಿಜಿಯಂ ನಿನ್ನೆ ಸಭೆ ಸೇರಿ ಈ ಇಬ್ಬರು ನ್ಯಾಯಾಧೀಶರುಗಳ ಹೆಸರುಗಳನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶದ ಬಡ್ತಿಗೆ ಶಿಫಾರಸು ಮಾಡಿದೆ.
ಸುಪ್ರೀಂ ಕೋರ್ಟ್ ನಲ್ಲಿ ಅನುಮೋದನೆಯಾಗಿರುವ 31 ನ್ಯಾಯಾಧೀಶ ಹುದ್ದೆಗಳ ಪೈಕಿ ಪ್ರಸ್ತುತ 27 ನ್ಯಾಯಾಧೀಶರು ಕಾರ್ಯನಿರ್ವಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್judgescollegiumಕೊಲಿಜಿಯಂJustices B R Gavai and Surya Kantನ್ಯಾಯಾಧೀಶ ಬಿ ಆರ್ ಗವಾಯ್ಸೂರ್ಯಕಾಂತ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


