ಅಯೋಧ್ಯೆ ವಿವಾದ: ಮೇ 10ಕ್ಕೆ ಸುಪ್ರೀಂನಲ್ಲಿ ಸಂಧಾನಕಾರರ ವರದಿ ವಿಚಾರಣೆ
ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ(ಮೇ 10) ವಿಚಾರಣೆ ನಡೆಸಲಿದೆ.

Published On :
ನವದೆಹಲಿ: ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ(ಮೇ 10) ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿಗಳಾದ ಎಸ್. ಎ. ಬೊಬ್ಬೆ, ಡಿ.ವೈ. ಚಂದ್ರಚೂಡ, ಅಶೋಕ್ ಭೂಷಣ್ ಮತ್ತು ಎಸ್ ಅಬ್ದುಲ್ ನಝೀರ್ ಸೇರಿದಂತೆ ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ವಿಚಾರಣೆ ನಡೆಸಲಿದೆ.
ಈ ಹಿಂದೆ ಐವರು ಸದಸ್ಯರ ನ್ಯಾಯಪೀಠ ಅಯೋಧ್ಯೆ ಪ್ರಕರಣ ಇತ್ಯರ್ಥಕ್ಕಾಗಿ ಮೂವರು ಸಂಧಾನಕಾರರ ಸಮಿತಿಯನ್ನು ನೇಮಕ ಮಾಡಿತ್ತು. ಇದೀಗ ಮೇ 10ರಿಂದ ಈ ಸಂಧಾನಕಾರರು ನೀಡಿರುವ ವರದಿಯ ವಿಚಾರಣೆ ನಡೆಯಲಿದೆ.
ಕಳೆದ ಮಾರ್ಚ್ 8ರಂದು ಸರ್ವೋಚ್ಚ ನ್ಯಾಯಾಲಯವು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಮೂರ್ತಿ ಎಫ್ ಎಂ ಐ ಖಲಿಫುಲ್ಲಾ ನೇತೃತ್ವದ ಮೂವರು ಸದಸ್ಯರ ಸಂಧಾನಕಾರರಿಗೆ ಈ ಸೂಕ್ಷ್ಮ ಪ್ರಕರಣ ಇತ್ಯರ್ಥಕ್ಕೆ ಅವಕಾಶ ಕಲ್ಪಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಕರಣವು ನ್ಯಾಯಾಲಯದ ಮುಂದೆ ಬರಲಿದೆ.
ನ್ಯಾಯಮೂರ್ತಿ ಖಲಿಫುಲ್ಲಾ ಅವರಲ್ಲದೆ ಶ್ರೀಶ್ರೀ ರವಿಶಂಕರ್ ಗುರೂಜಿ, ಹಿರಿಯ ವಕೀಲರಾದ ಶ್ರೀರಾಮ್ ಪಂಚು ಸಂಧಾನಕಾರರ ಸಮಿತಿಯ ಸದಸ್ಯರಾಗಿದ್ದಾರೆ.ಕೋರ್ಟ್ ಈ ಸಮಿತಿಗೆ ಒಟ್ಟು ನಾಲ್ಕು ವಾರಗಳಲ್ಲಿ ಸಂಧಾನ ಮಾತುಕತೆ ಮುಗಿಸಿ ಎಂಟು ವಾರಗಳಲ್ಲಿ ವರದಿ ನೀಡಬೇಕೆಂದು ಆದೇಶ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್ಶ್ರೀ ಶ್ರೀ ರವಿಶಂಕರ್Sri Sri RavishankarAyodhya land disputeRanjan Gogoiರಂಜನ್ ಗೊಗೊಯ್ಅಯೋಧ್ಯಾಭೂ ವಿವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


