ದೇಶ

ಭುವನೇಶ್ವರ್‌: ಹೊತ್ತಿ ಉರಿದ ರಾಜಧಾನಿ ಎಕ್ಸ್ ಪ್ರೆಸ್ ರೈಲು, ಪ್ರಯಾಣಿಕರು ಪಾರು

ದೆಹಲಿ-ಭುವನೇಶ್ವರ್‌ ನಡುವೆ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು...

ಭುವನೇಶ್ವರ್‌: ಹೊತ್ತಿ ಉರಿದ ರಾಜಧಾನಿ ಎಕ್ಸ್ ಪ್ರೆಸ್ ರೈಲು, ಪ್ರಯಾಣಿಕರು ಪಾರು
ರಾಜಧಾನಿ ಎಕ್ಸ್ ಪ್ರೆಸ್
Published On :
ಭುವನೇಶ್ವರ್‌: ದೆಹಲಿ-ಭುವನೇಶ್ವರ್‌ ನಡುವೆ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು ಯಾವುದೇ ಹಾನಿ ಇಲ್ಲದೆ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗಿನ ಮಧ್ಯಾಹ್ನ 12.50 ರಿಂದ 1 ಗಂಟೆ ವೇಳೆ ರೈಲಿನ ಕೊನೆಯಲ್ಲಿರುವ ಜನರೇರ್ಟ್‌ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ರೈಲನ್ನು ನಿಲ್ಲಿಸಿ ಬೇರೆ ಬೋಗಿಗಳನ್ನು ಬೇರ್ಪಡಿಸಿ ಬೆಂಕಿ ಇತರೆ ಬೋಗಿಗಳಿಗೆ ವ್ಯಾಪಿಸುವುದನ್ನು ತಡೆಯಲಾಗಿದೆ.
ಖರಗಪುರದ ವಿಭಾಗದಲ್ಲಿ ಖಂತಪಡದಲ್ಲಿ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವಘಡದಲ್ಲಿ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.