ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟ ಕಮಲ್ ಹಾಸನ್ ವಿರುದ್ಧ ಕ್ರಿಮಿನಲ್ ದೂರು
ನಟ ಕಮಲ್ ಹಾಸನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಡಿ, ಕ್ರಿಮಿನಲ್ ಪ್ರಕರಣವನ್ನು ದೆಹಲಿಯ ಪಟಿಯಾಲ ಹೌಸ್ ನಲ್ಲಿ ದಾಖಲಿಸಲಾಗಿದೆ.

Published On :
ನವದೆಹಲಿ: ನಟ ಕಮಲ್ ಹಾಸನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಡಿ, ಕ್ರಿಮಿನಲ್ ಪ್ರಕರಣವನ್ನು ದೆಹಲಿಯ ಪಟಿಯಾಲ ಹೌಸ್ ನಲ್ಲಿ ದಾಖಲಿಸಲಾಗಿದೆ.
ಗಾಂಧಿಯನ್ನು ಕೊಂದಿದ್ದ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ ಎಂಬ ಕಮಲ್ ಹಾಸನ್ ಹೇಳಿಕೆ ವಿರುದ್ಧ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ.
ಚುನಾವಣಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದ ಕಮಲ್ ಹಾಸನ್, ಈ ಹೇಳಿಕೆ ನೀಡಿದ್ದರು. ಕಮಲ್ ಹಾಸನ್ ಅವರನ್ನು ಪ್ರಚಾರದಿಂದ ನಿರ್ಬಂಧಿಸಬೇಕೆಂದು ಬಿಜೆಪಿ ಆಗ್ರಹಿಸಿತ್ತು.
"ಕಮಲ್ ಹಾಸನ್ ಹಿಂದೂಗಳನ್ನು ಭಯೋತ್ಪಾದನೆಗೆ ತಳುಕು ಹಾಕುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ" ಎಂದು ದೂರಿನಲ್ಲಿ ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kamal Haasanಕಮಲ್ ಹಾಸನ್criminal complaintಕ್ರಿಮಿನಲ್ ದೂರುHindu religious sentimentಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


