ತಮಿಳುನಾಡು: ಮನೆಯಲ್ಲಿ ಏರ್ ಕಂಡಿಷನ್ ಸ್ಫೋಟಗೊಂಡು ಮೂವರು ಸಾವು
ಮನೆಯಲ್ಲಿನ ಏರ್ ಕಂಡಿಷನ್(ಎಸಿ) ಸ್ಫೋಟಗೊಂಡು ವಿದ್ಯುತ್ ಸೋರಿಕೆಯಾದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ತಮಿಳುನಾಡಿನ...

Published On :
ಚೆನ್ನೈ: ಮನೆಯಲ್ಲಿನ ಏರ್ ಕಂಡಿಷನ್(ಎಸಿ) ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ತಿಂಡಿವಾನಂ ಸಮೀಪ ನಡೆದಿದೆ.
ತಿಂಡಿವಾನಂ ಸಮೀಪದ ಕಾವೇರಿಪಕ್ಕಮ್ ನ ರಾಜು(60), ಆತನ ಪತ್ನಿ(55) ಹಾಗೂ ಮಗ(26) ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯ ಕೋಣೆಯೊಂದರಲ್ಲಿ ರಾತ್ರಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಏರ್ ಕಂಡಿಷನ್ ಸ್ಫೋಟಗೊಂಡಿದ್ದು, ಬಳಿಕ ಬೆಂಕಿ ಬೆಡ್ ರೂಮ್ ಗೆ ಆವರಿಸಿದ ಪರಿಣಾಮ ಮೂವರು ಸಜೀವ ದಹನವಾಗಿದ್ದಾರೆ.
ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ಘಟನಾ ಸ‍್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


