ಅತ್ಯಾಚಾರ ಪ್ರಕರಣ: ನಟ ಕರಣ್ ಒಬೆರಾಯ್ ಜಾಮೀನು ಅರ್ಜಿ ವಜಾ
ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದಿ ಕಿರುತೆರೆಯ ಖ್ಯಾತ ನಟ ಕರಣ್ ಒಬೆರಾಯ್...

Published On :
ಮುಂಬೈ: ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದಿ ಕಿರುತೆರೆಯ ಖ್ಯಾತ ನಟ ಕರಣ್ ಒಬೆರಾಯ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಜಾಮೀನು ಕೋರಿ ಒಬೆರಾಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್ ಬಘಲೆ ಅವರು, ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.
ನಟನ ವಿರುದ್ಧ ಮಹಿಳೆ ಸುಳ್ಳು ಆರೋಪ ಮಾಡಿದ್ದು, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ಒಬೆರಾಯ್ ಪರ ವಕೀಲ ದಿನೇಶ್ ತಿವಾರಿ ಅವರು ತಿಳಿಸಿದ್ದಾರೆ.
2016ರಿಂದ ತನ್ನೊಂದಿಗೆ ಸಂಬಂಧದಲ್ಲಿದ್ದ 40 ವರ್ಷದ ನಟ ಒಬೆರಾಯ್ ತನ್ನನ್ನು ಮದುವೆಯಾಗುವುದಾಗಿ ವಂಚಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.
ಅತ್ಯಾಚಾರ ಎಸಗಿದ್ದಲ್ಲದೆ ತನ್ನ ಕೆಲವು ಆಕ್ಷೇಪಾರ್ಹ ವಿಡಿಯೋಗಳನ್ನು ತೆಗೆದಿದ್ದು, ಹಣ ನೀಡದಿದ್ದರೆ ಆ ವಿಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಮಹಿಳೆ ದೂರಿದ್ದರು.
ಮಹಿಳೆ ನೀಡಿದ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮೇ 6ರಂದು ನಟ ಒಬೆರಾಯ್ ಅವರನ್ನು ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


