ಅಮೇಥಿಯಲ್ಲಿ ನಮಾಜ್, ಉಜ್ಜಯಿನಿಯಲ್ಲಿ ದೇವಾಲಯ: ವೋಟಿಗಾಗಿ ಎಲ್ಲಾ ನಾಟಕ; ಇರಾನಿ ವಾಗ್ದಾಳಿ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೇಥಿಯಲ್ಲಿ ನಮಾಜ್ ಮಾಡುತ್ತಾರೆ, ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯಕ್ಕೆ ಹೋಗಿ ಪೂಜೆ ಮಾಡುತ್ತಾರೆ, ಈ ಎಲ್ಲಾ ...

Published On :
ಶಾಜಾಪುರ್: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೇಥಿಯಲ್ಲಿ ನಮಾಜ್ ಮಾಡುತ್ತಾರೆ, ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯಕ್ಕೆ ಹೋಗಿ ಪೂಜೆ ಮಾಡುತ್ತಾರೆ, ಈ ಎಲ್ಲಾ ನಾಟಕ ವೋಟಿಗಾಗಿ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವ್ಯಂಗ್ಯವಾಡಿದ್ದಾರೆ.
ಮತಕ್ಕಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೇಥಿಯಲ್ಲಿ ನಮಾಜ್ ಮಾಡುತ್ತಾರೆ, ಉಜ್ಜಯಿನಿಯಲ್ಲಿ ಮಹಾಕಾಳೇಶ್ವರ ದೇವಾಲಯದಲ್ಲಿ ಪೂಜೆ ಮಾಡುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಅವರನ್ನು ಟೀಕಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಅಮೇಥಿ ಲೋಕಸಭೆ ಕ್ಷೇತ್ರದಿಂದ ಸ್ಮೃತಿ ಇರಾನಿ ಸ್ಪರ್ಧಿಸಿದ್ದಾರೆ. ಸಹೋದರ ರಾಹುಲ್ ಗಾಂಧಿ ಪರ ಪ್ರಿಯಾಂಕಾ ಗಾಂಧಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಒಂದು ಲಕ್ಷ ಮತಗಳ ಅಂತರದಿಂದ ಸ್ಮೃತಿ ಇರಾನಿ ಸೋತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


