ನನ್ನ ಬದಲಿಸಿ ಮುಖ್ಯಮಂತ್ರಿಯಾಗಲು ಸಿಧು ಆಪೇಕ್ಷೆ- ಕ್ಯಾಪ್ಟನ್ ಅಮರೀಂದರ್ ಸಿಂಗ್
ಮಾಜಿ ಕ್ರಿಕೆಟ್ ಆಟಗಾರ, ರಾಜಕಾರಣಿ ನವಜೋತ್ ಸಿಂಗ್ ಸಿಧು ಆಗಾಗ್ಗೆ ಪರೋಕ್ಷ ಮಾಡುತ್ತಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಮುಖ್ಯಮಂತ್ರಿ, ಕ್ಯಾಪ್ಟನ್ ಅಮರೀಂದರ್ ಸಿಂಗ್ ನನ್ನ ಬದಲಿಸಿ ಅವರೇ ಮುಖ್ಯಮಂತ್ರಿಯಾಗಲು ಬಯಸಿದ್ದಾರೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಚಂಡೀಗಡ: ಮಾಜಿ ಕ್ರಿಕೆಟ್ ಆಟಗಾರ, ರಾಜಕಾರಣಿ ನವಜೋತ್ ಸಿಂಗ್ ಸಿಧು ಆಗಾಗ್ಗೆ ಪರೋಕ್ಷ ಮಾಡುತ್ತಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಮುಖ್ಯಮಂತ್ರಿ, ಕ್ಯಾಪ್ಟನ್ ಅಮರೀಂದರ್ ಸಿಂಗ್ ನನ್ನ ಬದಲಿಸಿ ಅವರೇ ಮುಖ್ಯಮಂತ್ರಿಯಾಗಲು ಬಯಸಿದ್ದಾರೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಹಿಂದಿನ ಕೆಲ ಕಾರ್ಯಕ್ರಮಗಳಲ್ಲಿಯೂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ನಡುವಿನ ಭಿನ್ನಾಭಿಪ್ರಾಯ ಭುಗಿಲೆದಿತ್ತು.
ಸಿಧು ಮಹತ್ವಾಕಾಂಕ್ಷಿ. ಪ್ರತಿಯೊಬ್ಬರಿಗೂ ತಮ್ಮದೇ ಆದ ಮಹತ್ವಕಾಂಕ್ಷೆ ಇರುತ್ತದೆ. ಬಾಲ್ಯದಿಂದಲೂ ಆತನನ್ನು ನಾನು ನೋಡುತ್ತಿದ್ದೇನೆ. ಅವರ ಅಭಿಪ್ರಾಯದಲ್ಲಿ ನನ್ನದೇನೂ ತಾಕರಾರು ಇಲ್ಲ. ಆದರೆ, ನನ್ನ ಬದಲಿಗೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಅದು ಅವರ ಪ್ರಮುಖ ಉದ್ದೇಶವಾಗಿದೆ. ಇದು ಪಕ್ಷ ಹಾಗೂ ಚುನಾವಣೆಗೆ ಸ್ಪರ್ಧಿಸುವವರ ಮೇಲೆ ಪರಿಣಾಮ ಬೀರಲಿದೆ. ನನ್ನ ಮೇಲೆ ಬಿರುವುದಿಲ್ಲ ಎಂದು ಹೇಳಿದ್ದಾರೆ.
ಸಿಧು ಅವರ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸೂಕ್ತ ರೀತಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಿದೆ. ಕೇಂದ್ರ ನಾಯಕರ ನಿರ್ಧಾರದ ಬಗ್ಗೆ ಎದುರು ನೋಡುತ್ತಿದ್ದೇನೆ.ಕಾಂಗ್ರೆಸ್ ಪಕ್ಷ ಅಶಿಸ್ತು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಅಮೃತಸರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ನಿರ್ಧಾರದ ಬಗ್ಗೆ ಸಿಧು ಪತ್ನಿ ನವಜೋತ್ ಕೌರ್ ಸಿಧು ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನು ನವಜೋತ್ ಸಿಂಗ್ ಸಿಧು ಕೂಡಾ ಬೆಂಬಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


