ಕಾಶ್ಮೀರ ಗಡಿಯಲ್ಲಿನ ಸೇನಾ ತರಬೇತಿ ಶಿಬಿರದಲ್ಲಿ ಸ್ಪೋಟ, ಎಂಟು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಗಡಿ ನಿಯಂತ್ರಣ ರೇಖೆಯ ಸಮೀಪ ತರಬೇತಿ ವೇಳೆ ಸಂಭವಿಸಿದ ಆಕಸ್ಮಿಕ ಸ್ಪೋಟದಲ್ಲಿ ಎಂಟು ಮಂದಿ ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಗಡಿ ನಿಯಂತ್ರಣ ರೇಖೆಯ ಸಮೀಪ ತರಬೇತಿ ವೇಳೆ ಸಂಭವಿಸಿದ ಆಕಸ್ಮಿಕ ಸ್ಪೋಟದಲ್ಲಿ ಎಂಟು ಮಂದಿ ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸ್ಪೋಟಕಗಳನ್ನು ನಿರ್ವಹಿಸುವ ಸಂದರ್ಭದ ಕುರಿಇತಂತೆ ತರಬೇತಿ ನಡೆಯುವಾಗಲೇ ಆಕಸ್ಮಿಕ ಸ್ಪೋಟವು ಸಂಭವಿಸಿದೆ.ಸ್ಪೋಟದಿಂದಾಗಿ ಓರ್ವ ಸೈನಿಕನ ಸ್ಥಿತಿ ಗಂಭೀರವಾಗಿದ್ದು ಇನ್ನುಳಿದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಗಾಯಗೊಂಡವ ಸೈನಿಕರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


