ಲೋಕಸಭೆ ಚುನಾವಣೆ ಫಲಿತಾಂಶ: 9 ಕಾಂಗ್ರೆಸ್ ಮಾಜಿ ಸಿಎಂಗಳಿಗೆ ಸೋಲಿನ ರುಚಿ
ಲೋಕಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ 349 ಸ್ಠಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ...

Published On :
ನವದೆಹಲಿ: ಲೋಕಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ 349 ಸ್ಠಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ಸತತ ಎರಡನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಆದರೆ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು, ಮೋದಿ ಅಲೆಯಲ್ಲಿ ವಿವಿಧ ರಾಜ್ಯಗಳ 9 ಮಾಜಿ ಮುಖ್ಯಮಂತ್ರಿಗಳು ಕೊಚ್ಚಿ ಹೋಗಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಭೋಪಾಲ್ ನಲ್ಲಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್, ಈಶಾನ್ಯ ದೆಹಲಿಯಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್, ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ಹರಿಶ್ ರಾವತ್, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್, ಸುಶಿಲ್ ಕುಮಾರ್ ಶಿಂಧೆ, ಮೇಘಾಲಯ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗಮ್, ಅರುಣಾಚಲ ಮಾಜಿ ಮುಖ್ಯಮಂತ್ರಿ ನಬಮ್ ಟುಕಿ ಅವರು ಸೋಲು ಅನುಭವಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


