ಮೇ.30 ರಂದು ಪ್ರಧಾನಿಯಾಗಿ ಮೋದಿ ಪದಗ್ರಹಣ: ಸಮಾರಂಭದಲ್ಲಿ ವಿಶ್ವನಾಯಕರು ಭಾಗಿ ಸಾಧ್ಯತೆ
2019 ರ ಲೋಕಸಭಾ ಚುನಾವಣೆಯ ಪ್ರಚಂಡ ಗೆಲುವಿನ ನಂತರ ಎರಡನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮೇ.30 ರಂದು ಪದಗ್ರಹಣ ಮಾಡಲಿದ್ದಾರೆ.

Published On :
ನವದೆಹಲಿ: 2019 ರ ಲೋಕಸಭಾ ಚುನಾವಣೆಯ ಪ್ರಚಂಡ ಗೆಲುವಿನ ನಂತರ ಎರಡನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮೇ.30 ರಂದು ಪದಗ್ರಹಣ ಮಾಡಲಿದ್ದಾರೆ.
2014 ರಂತೆ ಈ ಬಾರಿಯೂ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ವಿದೇಶದ ನಾಯಕರು ಆಗಮಿಸುವ ಸಾಧ್ಯತೆ ಇದೆ. 2014 ಕ್ಕಿಂತ ಈ ಬಾರಿಯ ಪದಗ್ರಹಣ ಕಾರ್ಯಕ್ರಮ ಬೃಹತ್ ಪ್ರಮಾಣದಲ್ಲಿ ನಡೆಯಲಿದೆ.
ಕಳೆದ ಬಾರಿ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನಿಸಲಾಗಿತ್ತು. ಈ ಬಾರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಂತಹ ವಿಶ್ವದ ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತ ಸರ್ಕಾರ ತನ್ನ ಶಕ್ತಿ ಪ್ರದರ್ಶನ ಮಾಡುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಪದಗ್ರಹಣ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


