ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಯಾದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದರು.

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದರು.
ಬಿಳಿ ಕುರ್ತಾ ಹಾಗೂ ಕುತ್ತಿಗೆ ತುಂಬಾ ಹಳದಿ ಬಣ್ಣದ ರುಮಾಲ್ ದರಿಸಿದ್ದ ನರೇಂದ್ರ ಮೋದಿಗೆ ಹೂ ಗುಚ್ಚ ನೀಡುವ ಮೂಲಕ ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಉಷಾ ಅಭಿನಂದಿಸಿದರು.
ಈ ಭೇಟಿಯ ಪೋಟೋಗಳನ್ನು ಟ್ವೀಟರ್ ನಲ್ಲಿ ಶೇರ್ ಮಾಡಿರುವ ವೆಂಕಯ್ಯನಾಯ್ಡು, ಇಂದು ಬೆಳಗ್ಗೆ ಮೋದಿ ಅವರನ್ನು ಭೇಟಿಯಾಗಿದ್ದೆ. ಮುಂದಿನ ಪ್ರಧಾನಮಂತ್ರಿ ಹಾಗೂ ಎನ್ ಡಿಎ ನಾಯಕರಾಗಿ ಆಯ್ಕೆಯಾಗಿದ್ದಕ್ಕೆ ಅವರನ್ನು ಅಭಿನಂದಿಸಿದ್ದೇನೆ. ಉಪಹಾರದ ವೇಳೆಯಲ್ಲಿ ತ್ವರಿತಗತಿಯ ಆರ್ಥಿಕ ಬೆಳವಣಿಗೆ ಹಾಗೂ ಸಾಂವಿಧಾನಿಕ ಸಂಸ್ಥೆಗಳನ್ನು ಬಲಗೊಳಿಸುವ ಸಂಬಂಧ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


