ಚುನಾವಣಾ ಗಣಿತದ ವಿರುದ್ಧ ಕೆಮಿಸ್ಟ್ರಿ ಮೇಲುಗೈ: ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ
ಹಾಲಿ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಚುನಾವಣಾ ಗಣಿತದ ವಿರುದ್ಧ ಕೆಮಿಸ್ಟ್ರಿ ಮೇಲುಗೈ ಸಾಧಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Published On :
ವಾರಾಣಸಿ: ಹಾಲಿ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಚುನಾವಣಾ ಗಣಿತದ ವಿರುದ್ಧ ಕೆಮಿಸ್ಟ್ರಿ ಮೇಲುಗೈ ಸಾಧಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮೇ.27 ರಂದು ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಧನ್ಯವಾದ ಅರ್ಪಿಸಲು ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಅಂಕಗಣಿತಕ್ಕಿಂತವನ್ನೂ ಮೀರಿ ಕೆಮಿಸ್ಟ್ರಿಯೊಂದಿದೆ ಎಂಬುದನ್ನು ರಾಜಕೀಯ ವಿಶ್ಲೇಷಕರು ಒಪ್ಪಿಕೊಳ್ಳಬೇಕೆಂದು ಮೋದಿ ಹೇಳಿದ್ದಾರೆ.
ದೇಶಕ್ಕೆ ನಾನು ಪ್ರಧಾನಿಯಾಗಿರಬಹುದು, ಆದರೆ ನಿಮಗೆ ನಾನು ಸೇವಕ, ನಿಮ್ಮ ಸಂಸದ ಎಂದು ಮೋದಿ ಹೇಳಿದ್ದಾರೆ. ಕೆಲಸ ಹಾಗೂ ಕೆಲಸ ಮಾಡುವವರು ಅದ್ಭುತಗಳನ್ನು ಸೃಷ್ಟಿಸುತ್ತಾರೆ ಎಂದು ಮೋದಿ ತಮ್ಮ ವಿಜಯದ ಕೀರ್ತಿಯನ್ನು ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ.
ಇದೇ ವೇಳೆ ತಮ್ಮ ವಿರುದ್ಧ ಸ್ಪರ್ಧಿಸಿದ್ದ ಅಭ್ಯರ್ಥಿಗಳಿಗೂ ತಾನು ಕೃತಜ್ಞರಾಗಿನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರಧಾನಿ ನರೇಂದ್ರ ಮೋದಿVaranasiPM ModiChemistryBJP workersಬಿಜೆಪಿ ಕಾರ್ಯಕರ್ತರುಕೆಮಿಸ್ಟ್ರಿPoll arithmeticರಾಜಕೀಯ ಲೆಕ್ಕಾಚಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


