ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿ ಎಸ್ ಗೋಲೆ
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಅಧ್ಯಕ್ಷ ಪಿ ಎಸ್ ಗೋಲೆ ಎಂದೇ ಜನಪ್ರಿಯರಾಗಿರುವ ಪ್ರೇಮ್ ಸಿಂಗ್ ತಮಂಗ್...

Published On :
ಸಿಕ್ಕಿಂ: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಅಧ್ಯಕ್ಷ ಪಿ ಎಸ್ ಗೋಲೆ ಎಂದೇ ಜನಪ್ರಿಯರಾಗಿರುವ ಪ್ರೇಮ್ ಸಿಂಗ್ ತಮಂಗ್ ಸೋಮವಾರ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಪಲ್ಜೊರ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಗಂಗಾ ಪ್ರಸಾದ್ ಪ್ರಮಾಣವಚನ ವಿಧಿ ಬೋಧಿಸಿದರು.ನೇಪಾಳಿ ಭಾಷೆಯಲ್ಲಿ ಪಿ ಎಸ್ ಗೋಲೆ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸುವಾಗ ನೂರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಹರ್ಷೋದ್ಘಾರ ಮಾಡಿದರು.
ಪ್ರಮಾಣವಚನ ಸಮಾರಂಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಮತ್ತು ಹಿರಿಯ ಸಿಕ್ಕಿಂ ಪ್ರಜಾಸತ್ತಾತ್ಮಕ ರಂಗದ ನಾಯಕರುಗಳ ಗೈರು ಎದ್ದು ಕಾಣುತ್ತಿತ್ತು.
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷವನ್ನು 2013ರಲ್ಲಿ ಸ್ಥಾಪಿಸಲಾಗಿತ್ತು. 32 ಸದಸ್ಯ ಬಲವನ್ನು ಹೊಂದಿರುವ ಸಿಕ್ಕಿಂ ವಿಧಾನಸಭೆ ಚುನಾವಣೆಯಲ್ಲಿ ಎಸ್ ಕೆಎಂ 17 ಸ್ಥಾನಗಳನ್ನು ಗೆದ್ದುಕೊಂಡಿತ್ತು. 15 ಸ್ಥಾನಗಳನ್ನು ಎಸ್ ಡಿಎಫ್ ಗೆದ್ದುಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


