ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕನಾಗಲು ಸಿದ್ಧ: ಶಶಿ ತರೂರ್
ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕನಾಗಲು ಸಿದ್ಧ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇರಳದ ತಿರುವನಂತಪುರ...

Published On :
ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕನಾಗಲು ಸಿದ್ಧ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದ ಸಂಸದ ಶಶಿ ತರೂರ್ ಅವರು ಸೋಮವಾರ ಹೇಳಿದ್ದಾರೆ.
ಒಂದು ವೇಳೆ ಪಕ್ಷ ನನಗೆ ಸಂಸದೀಯ ನಾಯಕನ ಜವಾಬ್ದಾರಿ ನೀಡಿದರೆ ಅದನ್ನು ಸಮರ್ಥವಾಗಿ ನಿರ್ವಹಿಸಲು ಸಿದ್ಧ ಮೂರನೇ ಬಾರಿ ಸಂಸತ್ ಗೆ ಆಯ್ಕೆಯಾಗಿರುವ ತರೂರ್ ತಿರಂಗ ಟಿವಿಗೆ ತಿಳಿಸಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ 'ನ್ಯಾಯ್' ಚುನಾವಣಾ ಸಿದ್ಧಾಂತವನ್ನು ನಾನು ಒಪ್ಪಿಕೊಂಡಿದ್ದೇನೆ. ಆದರೆ ಅದನ್ನು ಜನತೆಗೆ ತಲುಪಿಸುವಲ್ಲಿ ವಿಫಲವಾದೆವು ಎಂದರು.
ಇದೇ ವೇಳೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಶಶಿ ತರೂರ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಅಧಿಕೃತ ಪಕ್ಷವಾಗಲು ಕನಿಷ್ಠ 55 ಸ್ಥಾನಗಳ ಅಗತ್ಯವಿದೆ. ಆದರೆ 52 ಸ್ಥಾನ ಪಡೆದಿರುವ ಕಾಂಗ್ರೆಸ್ ಗೆ ಈ ಬಾರಿಯೂ ಅಧಿಕೃತ ಪ್ರತಿಪಕ್ಷದ ಸ್ಥಾನ ಸಿಗುವ ಸಾಧ್ಯತೆ ಇಲ್ಲ. ಆದರೂ ಬಿಜೆಪಿ ನಂತರ ಅತಿ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ ಕಳೆದ ಬಾರಿಯಂತೆ ಈ ಬಾರಿಯೂ ಲೋಕಸಭೆಯಲ್ಲಿ ತಮ್ಮ ನಾಯಕರೊಬ್ಬರನ್ನು ಆಯ್ಕೆ ಮಾಡಿಕೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


