ವಿಮಾನದಲ್ಲಿ ಮಹಿಳಾ ಸಿಬ್ಬಂದಿ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿದ ಕೇರಳ ಯುವಕನ ಬಂಧನ
ಇತ್ತೀಚಿಗೆ ಸಾರ್ವಜನಿಕ ಸ್ಥಳಗಳಲ್ಲಿ ಮಾತ್ರವಲ್ಲದೆ ವಿಮಾನದಲ್ಲೂ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವ ಘಟನೆಗಳು ಹೆಚ್ಚುತ್ತಿದ್ದು,

Published On :
ನವದೆಹಲಿ: ಇತ್ತೀಚಿಗೆ ಸಾರ್ವಜನಿಕ ಸ್ಥಳಗಳಲ್ಲಿ ಮಾತ್ರವಲ್ಲದೆ ವಿಮಾನದಲ್ಲೂ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವ ಘಟನೆಗಳು ಹೆಚ್ಚುತ್ತಿದ್ದು, ವಿಮಾನದ ಮಹಿಳಾ ಸಿಬ್ಬಂದಿ ಮುಂದೆಯೇ ಪ್ಯಾಂಟ್ ಜಿಪ್ ಬಿಚ್ಚಿದ ಕೇರಳ ಮೂಲದ ಯುವಕನನ್ನು ಸೋಮವಾರ ಬಂಧಿಸಲಾಗಿದೆ.
ಸೌದಿ ವಿಮಾನದಲ್ಲಿ ಜೆದ್ದಾದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಕೇರಳದ ಕೊಟ್ಟಾಯಂನ 24 ವರ್ಷದ ಅಬ್ದುಲ್ ಶಾಹಿದ್ ಶಮ್ ಸುದ್ದೀನ್ ನನ್ನು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ.
ದೆಹಲಿ ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಶಮ್ ಸುದ್ದೀನ್ ವಿಮಾನದಲ್ಲಿ ತನಗೆ ಸಿಗರೇಟ್ ಸೇದಲು ಅವಕಾಶ ನೀಡದ ಮಹಿಳಾ ಸಿಬ್ಬಂದಿ ಜತೆ ಮೊದಲು ವಾಗ್ವಾದ ನಡೆಸಿದ್ದಾರೆ. ನಂತರ ಮಹಿಳಾ ಸಿಬ್ಬಂದಿ ಸಹಾಯಕ್ಕಾಗಿ ತನ್ನ ಸಹೋದ್ಯೋಗಿಗಳನ್ನು ಕರೆದಾಗ ಪ್ಯಾಂಟ್ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ.
ವಿಮಾನ ದೆಹಲಿಯಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಮಹಿಳಾ ಸಿಬ್ಬಂದಿ ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದು, ಸಿಐಎಸ್ಎಫ್ ಸಿಬ್ಬಂದಿ ಶಮ್ ಸುದ್ದೀನ್ ನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಪೊಲೀಸರಿಗೆ ಒಪ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


