2ನೇ ಬಾರಿ ಪ್ರಧಾನಿಯಾಗುವ ಮುನ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಆಶೀರ್ವಾದ ಪಡೆದ ಮೋದಿ
ಯೋಜಿತ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾಜಿ ರಾಷ್ಟ್ರಪತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಇದ್ದಾರೆ.

Published On :
ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾಜಿ ರಾಷ್ಟ್ರಪತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಗುರುವಾರ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸುವ ಮೋದಿ ಮಾಜಿ ರಾಷ್ಟ್ರಪತಿಯನ್ನು "ರಾಜನೀತಿಜ್ಞ" ಎಂದು ಬಣ್ಣಿಸಿದ್ದಾರೆ.
"ಪ್ರಣಬ್ ದಾ ಅವರೊಂದಿಗಿನ ಭೇಟಿ ಎಂದಿಗೂ ಸಮೃದ್ದ ಅನುಭವವನ್ನು ಒಳಗೊಂಡಿರುತ್ತದೆ. ಅವರ ಜ್ಞಾನ ಮತ್ತು ಒಳನೋಟಗಳಿಗೆ ಸಾಟಿ ಇಲ್ಲ. ಅವರು ರಾಷ್ಟ್ರವು ಎಂದಿಗೂ ಮರೆಯಲಾಗದ ಕೊಡುಗೆ ನೀಡಿದ್ದಾರೆ." ಮೋದಿ ಟ್ವೀಟ್ ಮಾಡಿದ್ದಾರೆ.
"ಇಂದು ನಮ್ಮ ಭೇಟಿಯಲ್ಲಿ ಅವರ ಆಶೀರ್ವಾದವನ್ನು ಬೇಡಿದ್ದೆನು" ಅವರು ಹೇಳಿದರು.
ಜನವರಿಯಲ್ಲಿ ಮೋದಿ ನೇತೃತ್ವದ ಸರ್ಕಾರದ ಶಿಫಾರಸಿನ ಮೇರೆಗೆ ಮುಖರ್ಜಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ಪ್ರಶಸ್ತಿ ಲಭಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿPranab Mukherjeeಪ್ರಣಬ್ ಮುಖರ್ಜಿLok Sabha elections 2019 resultsಲೋಕಸಭಾ ಚುನಾವಣೆ 2019 ಫಲಿತಾಂಶಗ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


