ಕಾಶ್ಮೀರ: ಕುಲ್ಗಾಮ್ ನಲ್ಲಿ ಉಗ್ರರು, ಸೇನೆ ನಡುವೆ ಗುಂಡಿನ ಚಕಮಕಿ, ಓರ್ವ ಉಗ್ರ ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಸೇನಾಪಡೆಗಳ ನಡುವೆ ಇಂದು ಮುಂಜಾನೆಯಿಂದ ಗುಂಡಿನ ಚಕಮಕಿ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಸೇನಾಪಡೆಗಳ ನಡುವೆ ಇಂದು ಮುಂಜಾನೆಯಿಂದ ಗುಂಡಿನ ಚಕಮಕಿ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.
ಕುಲ್ಗಾಮ್ ಜಿಲ್ಲೆಯ ಮೊಹಮದ್ ಪೋರಾ ಪ್ರಾಂತ್ಯದ ಟಾಜಿಪೋರಾ ಗ್ರಾಮದಲ್ಲಿ ಈ ಎನ್ಕೌಂಟರ್ ನಡೆಯುತ್ತಿದ್ದು, ಸ್ಥಳದಲ್ಲಿ ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಉಗ್ರರು ಇದ್ದಾರೆ. ಈ ಪೈಕಿ ಓರ್ವ ಉಗ್ರರನ್ನು ಪ್ರಸ್ತುತ ಹೊಡೆದುರುಳಿಸಲಾಗಿದ್ದು, ಮತ್ತೋರ್ವ ಉಗ್ರನಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ನಿನ್ನೆಯಷ್ಟೇ ಅನಂತನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೇನೆ ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಸೆದೆಬಡಿದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿತ್ತು. ಅನಂತ್ ನಾಗ್ ನ ಕಚ್ವಾನ್ ಅರಣ್ಯದಲ್ಲಿ ಉಗ್ರರು ಅಡಗಿದ್ದಾರೆಂಬ ನಿರ್ದಿಷ್ಟ ಮಾಹಿತಿ ಆಧರಿಸಿ, ವಿಶೇಷ ಕಾರ್ಯಾಚರಣೆ ತಂಡ (ಎಸ್ಒಜಿ) ರಾಜ್ಯ ಪೊಲೀಸ್ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಭದ್ರತಾ ಪಡೆಗಳು ಒಂದು ನಿರ್ದಿಷ್ಟ ಪ್ರದೇಶದ ಕಡೆಗೆ ಸಾಗುತ್ತಿದ್ದಾಗ ಅಡಗಿ ಕುಳಿತಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ನಡೆಸಿದ್ದರು. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಗುಂಡಿನ ಚಕಮಕಿಯಾಗಿ ಇಬ್ಬರು ಉಗ್ರರು ಹತರಾಗಿದ್ದರು.
ಇನ್ನು ಕಾಶ್ಮೀರದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಅನಂತನಾಗ್ ಜಿಲ್ಲೆ ಕೂಡ ಒಂದಾಗಿದ್ದು, ಮೇ ತಿಂಗಳಲ್ಲೇ ಭದ್ರತಾ ಪಡೆಗಳು 8 ಮಂದಿ ಉಗ್ರರನ್ನು ಹತ್ಯೆಗೈದಿವೆ. ಅಂತೆಯೇ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಜೀವಂತ ಸೆರೆ ಹಿಡಿಯಲಾಗಿದೆ. ಇತ್ತೀಚೆಗಷ್ಟೇ ತ್ರಾಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಕಮಾಂಡರ್ ಝಾಕಿರ್ ಮುಸಾನನ್ನು ಕೊಲ್ಲಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆKulgam Encounterಕುಲ್ಗಾಮ್ ಎನ್ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


