ದೇಶ

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಒಡಿಶಾ ಸಿಎಂ ಪಟ್ನಾಯಕ್ ಗೈರು

ಸತತ ಐದನೇ ಬಾರಿಗೆ ಒಡಿಶಾ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ನವೀನ್ ಪಟ್ನಾಯಕ್ ಅವರು ಗುರುವಾರ....

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಒಡಿಶಾ ಸಿಎಂ ಪಟ್ನಾಯಕ್ ಗೈರು
ನರೇಂದ್ರ ಮೋದಿ - ನವೀನ್ ಪಟ್ನಾಯಕ್
Published On :
ಭುವನೇಶ್ವರ: ಸತತ ಐದನೇ ಬಾರಿಗೆ ಒಡಿಶಾ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ನವೀನ್ ಪಟ್ನಾಯಕ್ ಅವರು ಗುರುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಐದನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನವೀನ್ ಪಟ್ನಾಯಕ್ ಅವರು ನಾಳೆ 16ನೇ ವಿಧಾನಸಭೆಯ ಅಧಿವೇಶನ ಕರೆದಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ಸದನದ ನಾಯಕರಾಗಿರುವ ಮುಖ್ಯಮಂತ್ರಿಗಳು ಉಪಸ್ಥಿತಿ ಅಗತ್ಯವಾಗಿದೆ. ಹೀಗಾಗಿ ಅವರು ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತೆರಳುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ ಎರಡನೇ ಬಾರಿ ಪ್ರಧಾನಿಯಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಹಾಗೂ ಅವರ ಸಂಪುಟದ ಸದಸ್ಯರಿಗೆ ಒಡಿಶಾ ಸಿಎಂ ಶುಭಾಶಯ ಕೋರಿದ್ದಾರೆ.
ಲೋಕಸಭೆ ಚುನಾವಣೆ ಜತೆಗೆ ಒಡಿಶಾ ವಿಧಾನಸಭೆಗೂ ನಡೆದ ಚುನಾವಣೆಯಲ್ಲಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಪಿ 147 ಸ್ಥಾನಗಳ ಪೈಕಿ 112 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.