ದೇಶ

ನೂತನ ಸಂಪುಟ ಸೇರಲ್ಲ ಎಂದ ಅರುಣ್ ಜೇಟ್ಲಿ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ

ಅನಾರೋಗ್ಯದ ಹಿನ್ನೆಲೆಯಲ್ಲಿ ನೂತನ ಸಂಪುಟದಲ್ಲಿ ನನಗೆ ಯಾವುದೇ ಜವಾಬ್ದಾರಿ ನೀಡಬೇಡಿ ಎಂದು ತಮಗೆ ಪತ್ರ ಬರೆದಿದ್ದ ಅರುಣ್ ಜೇಟ್ಲಿ ಅವರ...

ನೂತನ ಸಂಪುಟ ಸೇರಲ್ಲ ಎಂದ ಅರುಣ್ ಜೇಟ್ಲಿ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ
ಅರುಣ್ ಜೇಟ್ಲಿ - ನರೇಂದ್ರ ಮೋದಿ
Published On :
ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ನೂತನ ಸಂಪುಟದಲ್ಲಿ ನನಗೆ ಯಾವುದೇ ಜವಾಬ್ದಾರಿ ನೀಡಬೇಡಿ ಎಂದು ತಮಗೆ ಪತ್ರ ಬರೆದಿದ್ದ ಅರುಣ್ ಜೇಟ್ಲಿ ಅವರ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾತ್ರಿ ದಿಢೀರ್ ಭೇಟಿ ನೀಡಿದ್ದಾರೆ.
ಇಂದು ರಾತ್ರಿ ಅರಣ್ ಜೇಟ್ಲಿ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಕೆಲ ಕಾಲ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿರುವ ನರೇಂದ್ರ ಮೋದಿ ಅವರು ನಾಳೆ ಸಂಜೆ 7 ಗಂಟೆಗೆ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಅವರ ಸಂಪುಟ ಸೇರುವ ಸಚಿವರ ಪಟ್ಟಿಯೂ ಸಿದ್ಧವಾಗಿದೆ. ಆದರೆ ಹೊಸ ಸರ್ಕಾರದಲ್ಲಿ ನನಗೆ ಯಾವುದೇ ಜವಾಬ್ದಾರಿ ಬೇಡ ಎಂದಿರುವ ಅರುಣ್ ಜೇಟ್ಲಿ ಅವರು, ಕಳೆದ 18 ತಿಂಗಳನಿಂದ ನಾನು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರ ಸಹಾಯದಿಂದ ಸುಧಾರಿಸಿಕೊಳ್ಳುತ್ತಿದ್ದೇನೆ ಎಂದು ಪ್ರಧಾನಿ ಮೋದಿಗೆ ಪತ್ರ ಬೆರೆದಿದ್ದರು.
ಇದೀಗ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಅವರು ಸಚಿವ ಸ್ಥಾನ ಬೇಡ ಎಂದು ಹೇಳಿರುವುದರಿಂದ ಈ ಬಾರಿ ಮುಖ್ಯವಾದ ಹಣಕಾಸು ಖಾತೆಯನ್ನು ಯಾರು ವಹಿಸಿಕೊಳ್ಳುತ್ತಾರೆ ಎಂಬ ಬಗ್ಗೆ ಚರ್ಚೆ ಆಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.