ಸಚಿವ ಸ್ಥಾನ ಹಂಚಿಕೆ ಅಸಮಾಧಾನ: ಮೋದಿ ಸಂಪುಟದಿಂದ ದೂರ ಉಳಿದ ಜೆಡಿ(ಯು)
ಪ್ರಧಾನಿ ನರೇಂದ್ರ ಮೋದಿ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು ಈ ಮಧ್ಯೆ ಎನ್‌ಡಿಎ ಮಿತ್ರಪಕ್ಷ ಜೆಡಿಯು ಪಕ್ಷ ಪ್ರಧಾನಿ ಮೋದಿ ನೂತನ ಸರ್ಕಾರದ ಜೊತೆ ಇರುವುದು ಸಂದೇಹವಾಗಿದೆ.

Published On :
ನವದೆಹಲಿ: ಮಹತ್ತರ ಬೆಳವಣಿಗೆಯಲ್ಲಿ ಎನ್‌ಡಿಎದ ಪ್ರಮುಖ ಮಿತ್ರಪಕ್ಷವಾದ ಜನತಾದಳ (ಸಂಯುಕ್ತ) ದ ನಾಯಕ ನಿತೀಶ್ ಕುಮಾರ್, ತಮ್ಮ ಪಕ್ಷ ನರೇಂದ್ರ ಮೋದಿ ಸರ್ಕಾರದಲ್ಲಿ ಈ ಬಾರಿ ಸಂಪುಟದ ಭಾಗವಾಗಿರುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.
ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಸಚಿವ ಸ್ಥಾನಗಳ ಹಂಚಿಕೆಗೆ ನಾವು ಸಮ್ಮತಿಸಿಲ್ಲ, ಆದರೆ ನಾವು ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುತ್ತೇವೆ ಎಂದು ತಿಳಿಸಿದ್ದಾರೆ.
ಬಿಜೆಪಿ ತನ್ನೆಲ್ಲ ಮಿತ್ರಪಕ್ಷಗಳಿಗೂ ಸಂಪುಟದಲ್ಲಿ ಕೇವಲ ಒಂದು ಸ್ಥಾನ ನೀಡಿದೆ ಎನ್ನಲಾಗಿದ್ದು, ಇದರ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿಯವರು ಈ ಹೇಳಿಕೆ ನೀಡಿದ್ದಾರೆ.
ನಿತಿಶ್ ಕುಮಾರ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆಗಿನ ಸಭೆಯ ವೇಳೆ 2 ಸಂಪುಟ ಸಚಿವ ಸ್ಥಾನ ಕೇಳಿದ್ದರು ಎಂದು ಮೂಲಗಳು ತಿಳಿಸಿವೆ.
40 ಸ್ಥಾನಗಳ ಬಿಹಾರದಲ್ಲಿ ನಿತೀಶ್ ಕುಮಾರ್ ಪಕ್ಷ 16 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ತಾನು ಸ್ಪರ್ಧಿಸಿದ್ದ ಎಲ್ಲ 17 ಸ್ಥಾನ ಗೆದ್ದಿತ್ತು.
2013ರಲ್ಲಿ ಮೋದಿ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದಾಗ ಜೆಡಿಯು ಎನ್‌ಡಿಎದಿಂದ ಹೊರನಡೆದಿತ್ತು. ಆದರೆ 2017ರ ನವೆಂಬರ್‌ನಲ್ಲಿ ಮತ್ತೆ ಮೈತ್ರಿಕೂಟಕ್ಕೆ ಮರಳಿತ್ತು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.