ಮಹಾತ್ಮಾ ಗಾಂಧಿ, ವಾಜಪೇಯಿ ಸಮಾಧಿಗೆ ಮೋದಿ ಗೌರವ; 2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಇಂದು
ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ...

Published On :
ನವದೆಹಲಿ: ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು.
ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್ ಕೆಎಸ್ ಬದೌರಿಯಾ ಹಾಜರಿದ್ದರು.
ಇದಕ್ಕೂ ಮುನ್ನ ಮೋದಿಯವರು ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸಮಾಧಿ ಬಳಿ ತೆರಳಿ ಅಗಲಿದ ಹಿರಿಯ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿMahatma Gandhiಅಟಲ್ ಬಿಹಾರಿ ವಾಜಪೇಯಿಮಹಾತ್ಮಾ ಗಾಂಧಿರಾಷ್ಟ್ರೀಯ ಯುದ್ಧ ಸ್ಮಾರಕAtal Bihari VajapayeeNational War Memorial
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


