ಮೋದಿ 2.0 ಮೊದಲ ನಿರ್ಧಾರ: ಯೋಧರ ಮಕ್ಕಳಿಗೆ ವಿದ್ಯಾರ್ಥಿ ವೇತನ ಹೆಚ್ಚಳ, ಹುತಾತ್ಮ ಪೊಲೀಸರ ಮಕ್ಕಳಿಗೂ ವಿಸ್ತರಣೆ
ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಮೇ.31 ರಂದು ನಡೆದಿದ್ದು, ದೇಶ ರಕ್ಷಣೆ ಮಾಡುವವರಿಗೆ ಕೊಡುಗೆ ನೀಡಲಾಗಿದೆ.

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಮೇ.31 ರಂದು ನಡೆದಿದ್ದು, ದೇಶ ರಕ್ಷಣೆ ಮಾಡುವವರಿಗೆ ಕೊಡುಗೆ ನೀಡಲಾಗಿದೆ.
ರಾಷ್ಟ್ರೀಯ ರಕ್ಷಣಾ ನಿಧಿ ವ್ಯಾಪ್ತಿಯಗೆ ಬರುವ ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆಯಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಜಾರಿಗೆ ತರಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಯೋಧರ ಮಕ್ಕಳಿಗೆ ಈ ಹಿಂದೆ ಮಾಸಿಕ 2000 ರೂಪಾಯಿ ಇದ್ದ ವಿದ್ಯಾರ್ಥಿ ವೇತನವನ್ನು ಈಗ ವಿದ್ಯಾರ್ಥಿಗಳಿಗೆ 2,500 ರೂಪಾಯಿಗಳಿಗೆ ಏರಿಕೆ ಮಾಡಲಾಗಿದ್ದರೆ, ವಿದ್ಯಾರ್ಥಿನಿಯರಿಗೆ 2,250 ರಿಂದ 3000 ಕ್ಕೆ ಏರಿಕೆ ಮಾಡಲಾಗಿದೆ.
ಇನ್ನು ವಿದ್ಯಾರ್ಥಿ ವೇತನದ ವ್ಯಾಪ್ತಿಯನ್ನು ನಕ್ಸಲ್ ಹಾಗೂ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ರಾಜ್ಯ ಪೊಲೀಸ್ ಅಧಿಕಾರಿಗಳ ಮಕ್ಕಳಿಗೆ ಲಭ್ಯವಾಗುವಂತೆ ವಿಸ್ತರಿಸಲಾಗಿದೆ. ಇದೇ ವೇಳೆ ರಾಜ್ಯ ಪೊಲೀಸ್ ಅಧಿಕಾರಿಗಳ ಮಕ್ಕಳಿಗೆ ಹೊಸದಾಗಿ ವಿದ್ಯಾರ್ಥಿ ವೇತನ ಪಡೆಯುವ ಮಿತಿಯನ್ನು ವಾರ್ಷಿಕ 500 ಕ್ಕೆ ನಿಗದಿಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
scholarshipMartyrs\' childrenಮೋದಿ ಸರ್ಕಾರ 2.0Modi govt 2.0first decisionಮೊದಲ ಸಚಿವ ಸಂಪುಟ ಸಭೆ ನಿರ್ಣಯಹುತಾತ್ಮರ ಮಕ್ಕಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


