ಧೀರ್ಘಕಾಲ ತೈಲ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಧರ್ಮೇಂದ್ರ ಪ್ರಧಾನ್ ಪಾತ್ರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಮತ್ತೆ ಪೆಟ್ರೋಲಿಯಂ ಖಾತೆ ಪಡೆದಿರುವ ಧರ್ಮೇಂದ್ರ ಪ್ರಧಾನ್ ದೇಶದಲ್ಲಿ ಧೀರ್ಘ ಕಾಲ ತೈಲ ಸಚಿವರಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಮತ್ತೆ ಪೆಟ್ರೋಲಿಯಂ ಖಾತೆ ಪಡೆದಿರುವ ಧರ್ಮೇಂದ್ರ ಪ್ರಧಾನ್ ದೇಶದಲ್ಲಿ ಧೀರ್ಘ ಕಾಲ ತೈಲ ಸಚಿವರಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.
ಈ ಬಾರಿ ದೇಶೀಯ ತೈಲ ಮತ್ತು ಅನಿಲ ಉತ್ಪಾದನೆ ಹೆಚ್ಚಿಸಲು , ರಾಷ್ಟ್ರೀಯ ಅನಿಲ ಗ್ರಿಡ್ ಹಾಗೂ ಸೂಕ್ತ ರೀತಿಯ ಮೂಲಸೌಕರ್ಯದ ಸಾಮಾನ್ಯ ಮಾರುಕಟ್ಟೆ ಸೃಷ್ಟಿಗೆ ಆದ್ಯತೆ ನೀಡುವುದಾಗಿ ಅವರು ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ರಾಮ್ ನಾಯಕ್ ತೈಲ ಸಚಿವರಾಗಿ ಐದು ವರ್ಷ ಪೂರ್ಣಗೊಳಿಸಿದ್ದರು. ಇವರ ನಂತರ ಧರ್ಮೇಂದ್ರ ಪ್ರಧಾನ್ ಮಾತ್ರ ತೈಲ ಸಚಿವರಾಗಿ ಐದು ವರ್ಷ ಅಧಿಕಾರವನ್ನು ಪೂರ್ಣಗೊಳಿಸಿದ್ದಾರೆ.
ದಿವಂಗತ ಮುರಳಿ ದೇವೋರಾ ಜನವರಿ 2006ರಿಂದ 2011ರವರೆಗೂ ಐದು ವರ್ಷ ತೈಲ ಸಚಿವರಾಗಿ ಪೂರ್ಣಗೊಳಿಸಿದ್ದರು. ಆದರೆ, ಅದು ಯುಪಿಎ ನೇತೃತ್ವದಲ್ಲಿನ ಎರಡು ಸರ್ಕಾರಗಳಲ್ಲಿ ವಿಭಜಿಸಲ್ಪಟ್ಟಿತ್ತು.
ಪ್ರಧಾನಿ ನರೇಂದ್ರ ಮೋದಿ ಮತ್ತೆ ನಂಬಿಕೆಯಿಂದ ಧರ್ಮೇಂದ್ರ ಪ್ರಧಾನ್ ಅವರಿಗೆ ಪೆಟ್ರೋಲಿಯಂ ಖಾತೆಯನ್ನೆ ನೀಡದ್ದು, ನಾಯಕ್ ಹಾಗೂ ದೇವೋರಾ ಅವರ ದಾಖಲೆಯನ್ನು ಸರಿಗಟ್ಟುವುದಕ್ಕೆ ಸಿದ್ದರಾಗಿದ್ದಾರೆ.
ನೂತನ ಸರ್ಕಾರದಲ್ಲಿ ಪೆಟ್ರೋಲಿಯಂ ಖಾತೆ ಜೊತೆಗೆ ಹೆಚ್ಚುವರಿಯಾಗಿ ಉಕ್ಕು ಖಾತೆಯನ್ನು ಧರ್ಮೇಂದ್ರ ಪ್ರಧಾನ್ ಅವರಿಗೆ ನೀಡಲಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


