ದೇಶ

ಪಿ ಚಿದಂಬರಂಗೆ ಮತ್ತೆ ಹಿನ್ನಡೆ: ಏಮ್ಸ್ ವರದಿ ಬೆನ್ನಲ್ಲೇ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಸಿಬಿಐ ವಶದಲ್ಲಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ಮತ್ತೆ ಹಿನ್ನಡೆಯಾಗಿದ್ದು, ಅವರ ಆರೋಗ್ಯ ಕುರಿತ ಏಮ್ಸ್ ವೈದ್ಯರ ವರದಿ ಬೆನ್ನಲ್ಲೇ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದೆ.

ಪಿ ಚಿದಂಬರಂಗೆ ಮತ್ತೆ ಹಿನ್ನಡೆ: ಏಮ್ಸ್ ವರದಿ ಬೆನ್ನಲ್ಲೇ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ಸಂಗ್ರಹ ಚಿತ್ರ
Published On :

ನವದೆಹಲಿ: ಸಿಬಿಐ ವಶದಲ್ಲಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ಮತ್ತೆ ಹಿನ್ನಡೆಯಾಗಿದ್ದು, ಅವರ ಆರೋಗ್ಯ ಕುರಿತ ಏಮ್ಸ್ ವೈದ್ಯರ ವರದಿ ಬೆನ್ನಲ್ಲೇ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬಂರಂ ಈ ಹಿಂದೆ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸಿಬಿಐ ಪರ ವಕೀಲರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಚಿದಂಬರಂ ಆರೋಗ್ಯ ತಪಾಸಣೆಗಾಗಿ ದೆಹಲಿಯ ಏಮ್ಸ್ ವೈದ್ಯರ ಸಮಿತಿಯೊಂದನ್ನು ರಚಿಸಿ ತಪಾಸಣೆ ಮಾಡಿ ವರದಿ ನೀಡುವಂತೆ ಸೂಚಿಸಿತ್ತು.

ಇದೀಗ ಚಿದಂಬರಂ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರ ಸಮಿತಿ ದೆಹಲಿ ಹೈಕೋರ್ಟ್ ಗೆ ತಮ್ಮ ವರದಿ ನೀಡಿದ್ದು, ವರದಿಯಲ್ಲಿ ಚಿದಂಬಂರಂ ಅವರ ಆರೋಗ್ಯ ಸರಿ ಇದ್ದು, ಆಸ್ಪತ್ರೆಗೆ ದಾಖಲಿಸಬೇಕಾದ ಅಗತ್ಯವಿಲ್ಲ ಎಂದು ಹೇಳಿದೆ. ಆದರೆ ಚಿದಂಬರಂ ಅವರ ಆರೋಗ್ಯದ ನಿಟ್ಟಿನಲ್ಲಿ ತಿಹಾರ್ ಜೈಲಿನಲ್ಲಿ ಅವರಿಗೆ ಮಿನರಲ್ ವಾಟರ್ ಮತ್ತು ಮನೆ ಊಟ ನೀಡುವಂತೆ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ. ಅಲ್ಲದೆ ಈ ವರದಿಯನ್ನು ಹೈಕೋರ್ಟ್ ಗೆ ರವಾನೆ ಮಾಡಲಾಗಿದ್ದು, ಈ ವರದಿ ಕೈ ಸೇರಿದ ಬೆನ್ನಲ್ಲೇ ದೆಹಲಿ ಹೈಕೋರ್ಟ್ ಚಿದಂಬರಂ ಪರ ವಕೀಲರು ಸಲ್ಲಿಕೆ ಮಾಡಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಆ ಮೂಲಕ ಚಿದಂಬರಂ ಮತ್ತೆ ತಿಹಾರ್ ಜೈಲಿನಲ್ಲೇ ಮತ್ತಷ್ಟು ದಿನ ಉಳಿಯಬೇಕಿದೆ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.