ನ.05 ರಂದು ದೇವೇಂದ್ರ ಫಡ್ನವೀಸ್ ಸಿಎಂ ಪದಗ್ರಹಣ!?
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಷಯದಲ್ಲಿ ಗೊಂದಲ ಮುಂದುವರೆದಿದೆ. ಆದರೆ ಇತ್ತ ಬಿಜೆಪಿ ಮುಖ್ಯಮಂತ್ರಿಗಳ ಪದಗ್ರಹಣಕ್ಕೆ ಸಜ್ಜಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಷಯದಲ್ಲಿ ಗೊಂದಲ ಮುಂದುವರೆದಿದೆ. ಆದರೆ ಇತ್ತ ಬಿಜೆಪಿ ಮುಖ್ಯಮಂತ್ರಿಗಳ ಪದಗ್ರಹಣಕ್ಕೆ ಸಜ್ಜಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಜೀ ನ್ಯೂಸ್ ಪ್ರಕಟಿಸಿರುವ ವರದಿಯ ಪ್ರಕಾರ ಮಹಾರಾಷ್ಟ್ರದಲ್ಲಿ ಏಕೈಕ ದೊಡ್ಡ ಪಕ್ಷವಾಗಿ(ಹೆಚ್ಚು ಶಾಸಕರ ಸಂಖ್ಯಾಬಲ) ಹೊಂದಿರುವ ಅರ್ಹತೆಯನ್ನೇ ಇಟ್ಟುಕೊಂಡು ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ. ನ.05 ಅಥವಾ 6 ರಂದು ದೇವೇಂದ್ರ ಫಡ್ನವೀಸ್ ಮುಂಬೈ ನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.
ಶಿವಸೇನೆ ಮೈತ್ರಿಗೆ ಒಪ್ಪದೇ ಇದ್ದರೂ ಸಹ ಸರ್ಕಾರ ರಚನೆಗೆ ತೀರ್ಮಾನಿಸಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಶಿವಸೇನೆ 50:50 ಅಧಿಕಾರ ಹಂಚಿಕೆ ಸೂತ್ರದಿಂದ ಯಾವುದೇ ಕಾರಣಕ್ಕೂ ಹಿಂದೆಸರಿಯುವುದಿಲ್ಲ ಎಂದು ಶಿವಸೆನೆಯ ನಾಯಕ ಸಂಜಯ್ ರಾವುತ್ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


