ದೇಶ

ಮಹಾರಾಷ್ಟ್ರದಲ್ಲಿ ಶಿವಸೇನೆ ನಾಯಕ ಮುಖ್ಯಮಂತ್ರಿಯಾಗುತ್ತಾರೆ: ಸಂಜಯ್ ರಾವತ್ 

ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ವಿಷಯದಲ್ಲಿ ಬಿಜೆಪಿ ಜೊತೆ ಭಿನ್ನಮತ ಹೊಂದಿರುವ ಮೈತ್ರಿಪಕ್ಷ ಶಿವಸೇನೆ ಶುಕ್ರವಾರ ಹೇಳಿಕೆ ನೀಡಿದ್ದು, ಶಿವಸೇನೆ ನಾಯಕರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ ಎಂದಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ನಾಯಕ ಮುಖ್ಯಮಂತ್ರಿಯಾಗುತ್ತಾರೆ: ಸಂಜಯ್ ರಾವತ್ 
ಸಂಜಯ್ ರಾವತ್
Published On :

ಮುಂಬೈ: ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ವಿಷಯದಲ್ಲಿ ಬಿಜೆಪಿ ಜೊತೆ ಭಿನ್ನಮತ ಹೊಂದಿರುವ ಮೈತ್ರಿಪಕ್ಷ ಶಿವಸೇನೆ ಶುಕ್ರವಾರ ಹೇಳಿಕೆ ನೀಡಿದ್ದು, ಶಿವಸೇನೆ ನಾಯಕರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ ಎಂದಿದೆ.


ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ರಚನೆ ಬಗ್ಗೆ ಎರಡೂ ಪಕ್ಷಗಳ ಮಧ್ಯೆ ಯಾವುದೇ ಮಾತುಕತೆಗಳು ನಡೆದಿಲ್ಲ. ಶಿವಸೇನೆಯಿಂದ ಮಹಾರಾಷ್ಟ್ರ ಮುಖ್ಯಮಂತ್ರಿಯಾಗುತ್ತಾರೆ ಎಂದು ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ.


ಸರ್ಕಾರ ರಚನೆಯಲ್ಲಿ ಬಿಜೆಪಿ ಮುಂದೆ ನಾವು ಯಾವುದೇ ದೊಡ್ಡ ಬೇಡಿಕೆಯನ್ನು ಮುಂದಿಟ್ಟಿಲ್ಲ, ಅವರ ಜೊತೆ ಮಾತುಕತೆಯೂ ನಡೆಸಿಲ್ಲ, ಅವರು ದೊಡ್ಡ ಮನುಷ್ಯರು. ಶಿವಸೇನೆ ತೀರ್ಮಾನಿಸಿದರೆ ಸ್ಥಿರ ಸರ್ಕಾರ ರಚಿಸಲು ಬೇಕಾದಷ್ಟು ಸದಸ್ಯರ ಬೆಂಬಲ ಸಿಗಲಿದ್ದು ಸರ್ಕಾರ ರಚಿಸಲು ಸಾಧ್ಯವಿದೆ ಎಂದರು.


50:50 ಸೂತ್ರದ ಪ್ರಕಾರ ಸರ್ಕಾರ ರಚಿಸಲು ರಾಜ್ಯದ ಜನತೆ ತೀರ್ಪು ಕೊಟ್ಟಿದ್ದಾರೆ. ಮಹಾರಾಷ್ಟ್ರ ಜನತೆ ಮುಂದೆ ಆದ ತೀರ್ಮಾನವಿದು ಎಂದು ಕೂಡ ಹೇಳಿದರು.


50:50 ಸೂತ್ರದಂತೆ ಖಾತೆಗಳ ಹಂಚಿಕೆ ಮಾಡಿ ಎರಡೂ ಪಕ್ಷಗಳಿಂದ ಎರಡೂವರೆ ವರ್ಷಗಳ ಕಾಲ ಒಬ್ಬೊಬ್ಬರು ಸಿಎಂ ಹುದ್ದೆ ವಹಿಸಲಿ ಎಂಬುದು ಶಿವಸೇನೆಯ ಬೇಡಿಕೆಯಾಗಿದೆ. ಆದರೆ ಬಿಜೆಪಿ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ದೇವೇಂದ್ರ ಫಡ್ನವಿಸ್ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳಿದೆ. 


ಇದಿನ್ನು ಯಾವ ಮಟ್ಟಕ್ಕೆ ಹೋಗುತ್ತದೆ, ಮಹಾರಾಷ್ಟ್ರದಲ್ಲಿ ಯಾರು ಸರ್ಕಾರ ರಚನೆ ಮಾಡುತ್ತಾರೆ ಎಂಬುದು ಸದ್ಯದ ಕುತೂಹಲವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.